ADVERTISEMENT

ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸೂಕ್ತ ಸಮಯದಲ್ಲಿ ನಿರ್ಧಾರ: ಜೋಶಿ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 10:42 IST
Last Updated 10 ಜುಲೈ 2020, 10:42 IST
ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ   

ಹುಬ್ಬಳ್ಳಿ: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕೋವಿಡ್–19 ನಿಯಂತ್ರಣಕ್ಕೆ ಕಲ್ಯಾಣ ಕಾರ್ಯಕ್ರಮ ಹಮ್ಮಿಕೊಂಡಿರುವುದರಿಂದ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಹರಡುವಿಕೆಯಿಂದ ಸರ್ಕಾರಗಳ ಆದಾಯದಲ್ಲಿ ಕುಸಿತವಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಕಚ್ಚಾತೈಲ ಬೆಲೆಯಲ್ಲಿ ಹೆಚ್ಚಳವಾಗಿದೆ. ಆಮದು ಮೇಲಿನ ಅವಲಂಬನೆ ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರಯತ್ನಗಳು ಸಾಗಿವೆ. ಬೆಲೆ ಇಳಿಕೆಯ ವಿಷಯವನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುವುದು ಎಂದು ಅವರು ಹೇಳಿದರು.

ಹಿಂದಿನ ಯುಪಿಎ ಸರ್ಕಾರವೇ ಪೆಟ್ರೋಲ್‌, ಡೀಸೆಲ್‌ ಬೆಲೆ ನಿಯಂತ್ರಣವನ್ನು ಮುಕ್ತಗೊಳಿಸಿತ್ತು. ಅದನ್ನೇ ಈಗಲೂ ಮುಂದುವರೆಸಲಾಗಿದೆ. ಆರ್ಥಿಕ ಸಂಪನ್ಮೂಲ ಸಂಗ್ರಹ ದೃಷ್ಟಿಯಿಂದ ಕೆಲವು ರಾಜ್ಯಗಳೂ ತೆರಿಗೆ ವಿಧಿಸಿವೆ. ಬೆಲೆ ಇಳಿಕೆ ಬಗ್ಗೆ ಹೆಚ್ಚಿಗೆ ಪ್ರತಿಕ್ರಿಯಿಸಲಾರೆ ಎಂದರು.

ADVERTISEMENT

ಕಲ್ಲಿದ್ದಲು ರಹಿತ ಗಣಿಗಾರಿಕೆ ವಿಸ್ತರಣೆಗೆ ಹೊಸದಾಗಿ ಪರಿಸರ ಮಾಲಿನ್ಯ ಅನುಮತಿ ಪಡೆಯುವುದರಿಂದ ವಿನಾಯ್ತಿ ನೀಡುವ ಬಗ್ಗೆ ಚರ್ಚೆ ನಡೆದಿದೆ. ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆಗೆ ಅನುಮತಿ ಪಡೆಯುವ ಅಗತ್ಯವಿಲ್ಲ. ಅದನ್ನೇ ಉಳಿದ ಗಣಿಗಾರಿಕೆಗಳಿಗೂ ವಿಸ್ತರಿಸುವ ಚಿಂತನೆ ನಡೆದಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.