ADVERTISEMENT

ರಾಜ್ಯದ ಅಧಿಕಾರಿಗಳ ಜೊತೆ ಕೇಂದ್ರ ಸಚಿವರ ಸಭೆಗೆ ಅವಕಾಶ ಇಲ್ಲ: ಜಿ. ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 6 ಜುಲೈ 2024, 16:02 IST
Last Updated 6 ಜುಲೈ 2024, 16:02 IST
<div class="paragraphs"><p>ಜಿ. ಪರಮೇಶ್ವರ</p></div>

ಜಿ. ಪರಮೇಶ್ವರ

   

ಬೆಂಗಳೂರು: ‘ಕೇಂದ್ರದ ಸಚಿವರಿಗೆ ನಮ್ಮ ರಾಜ್ಯದ ಅಧಿಕಾರಿಗಳ ಜೊತೆ ಸಭೆ ನಡೆಸುವ ಅವಕಾಶ ಇಲ್ಲ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಕೇಂದ್ರ ಭಾರಿ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನಡೆಸಿದ ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರಾದ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ, ‘ರಾಜ್ಯದಲ್ಲಿ ಯಾರೇ ಮುಖ್ಯಮಂತ್ರಿ ಇದ್ದರೂ ಶಿಷ್ಟಾಚಾರ ಉಲ್ಲಂಘನೆ ಆಗದಂತೆ ನೋಡಿಕೊಳ್ಳಿ ಎಂದು ಹೇಳುತ್ತಾರೆ. ರಾಜ್ಯದ ಅಧಿಕಾರಿಗಳ ಜೊತೆ ಸಭೆ ನಡೆಸುವ ಅವಕಾಶ ಇಲ್ಲವೆಂಬ ವಿಚಾರ ಕುಮಾರಸ್ವಾಮಿ ಅವರಿಗೂ ಗೊತ್ತಿದೆ. ದಿಶಾ ಕಾರ್ಯಕ್ರಮದಡಿ ಸಭೆ ನಡೆಸಿ ಕೆಲವು ಸೂಚನೆಗಳನ್ನು ನೀಡಬಹುದಷ್ಟೇ’ ಎಂದರು.

ADVERTISEMENT

‘ಸಂಸದ ಡಿ.ಕೆ. ಸುರೇಶ್ ಕರೆದಾಗ ಕೆಲವು ಅಧಿಕಾರಿಗಳು ಮಾತ್ರ ಹೋಗುತ್ತಿದ್ದರು’ ಎಂದೂ ಅವರು ಸಮರ್ಥಿಸಿಕೊಂಡರು.

ಅಗತ್ಯ ಬಿದ್ದರೆ ವಿಚಾರಣೆ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಆರೋಪ ಸಂಬಂಧ ಮಾಜಿ ಸಚಿವ ಬಿ. ನಾಗೇಂದ್ರ, ಶಾಸಕ ಬಸನಗೌಡ ದದ್ದಲ್ ಅವರನ್ನು ವಿಚಾರಣೆಗೆ ಬರುವಂತೆ ಎಸ್‌ಐಟಿ ನೋಟಿಸ್‌ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ತನಿಖೆಗೆ ಅವಶ್ಯ ಇರುವವರನ್ನು ಎಸ್‌ಐಟಿಯುವರು ಕರೆಯುತ್ತಾರೆ. ಈಗಾಗಲೇ ಮಾಜಿ ಸಚಿವರ ಆಪ್ತ ಸಹಾಯಕರನ್ನು ವಿಚಾರಣೆ ನಡೆಸಿದ್ದಾರೆ’ ಎಂದರು.

‘ಮುಡಾ ಹಗರಣವನ್ನು ಡಿ.ಕೆ. ಶಿವಕುಮಾರ್ ಹೊರತಂದಿದ್ದಾರೆ’ ಎಂಬ ಎಚ್‌.ಡಿ. ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಗೊಂದಲ ಸೃಷ್ಟಿಸಲು ಅವರು ಆ ರೀತಿಯ ಹೇಳಿಕೆ ಕೊಟ್ಟಿದ್ದಾರೆ. ಅವರ ಹೇಳಿಕೆಯಲ್ಲಿ ಸತ್ಯ ಇಲ್ಲ ಎಂದು ಶಿವಕುಮಾರ್ ಅವರೇ ಹೇಳಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.