ADVERTISEMENT

ರಾಷ್ಟ್ರೀಯ ಯೋಜನೆಯಾಗಿ ಭದ್ರಾ ಮೇಲ್ದಂಡೆ: ದೇವೇಗೌಡ ಆಗ್ರಹ

​ಪ್ರಜಾವಾಣಿ ವಾರ್ತೆ
Published 30 ಜುಲೈ 2024, 0:18 IST
Last Updated 30 ಜುಲೈ 2024, 0:18 IST
ಎಚ್‌. ಡಿ. ದೇವೇಗೌಡ
ಎಚ್‌. ಡಿ. ದೇವೇಗೌಡ   

ನವದೆಹಲಿ: ‘ಹನಿ ನೀರಾವರಿ ಮೂಲಕ ಮಧ್ಯ ಕರ್ನಾಟಕದ ಜಿಲ್ಲೆಗಳಿಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಹಾಗೂ ಅಗತ್ಯ ಅನುದಾನ ನೀಡಬೇಕು’ ಎಂದು ರಾಜ್ಯಸಭೆಯ ಜೆಡಿಎಸ್‌ ಸದಸ್ಯ ಎಚ್‌.ಡಿ.ದೇವೇಗೌಡ ಆಗ್ರಹಿಸಿದರು. 

ರಾಜ್ಯಸಭೆಯಲ್ಲಿ ಬಜೆಟ್‌ ಮೇಲಿನ ಚರ್ಚೆಯಲ್ಲಿ ಸೋಮವಾರ ಪಾಲ್ಗೊಂಡು ಸುಮಾರು 40 ನಿಮಿಷ ಮಾತನಾಡಿದ ಅವರು, ಕರ್ನಾಟಕದ ಕುಡಿಯುವ ನೀರಿನ ಸಂಕಷ್ಟದ ಸ್ಥಿತಿಯನ್ನು ಬಿಚ್ಚಿಟ್ಟರು. 

‘ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಎಂದು ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ಕೇಂದ್ರ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು’ ಎಂದು  ಆಗ್ರಹಿಸಿದರು.    

ADVERTISEMENT

ಕೇಂದ್ರದ ಬಜೆಟ್‌ನಲ್ಲಿ ಆಂಧ್ರ ಪ್ರದೇಶ ಹಾಗೂ ಬಿಹಾರಕ್ಕೆ ವಿಶೇಷ ಅನುದಾನ ನೀಡಿದ್ದು ತಪ್ಪಲ್ಲ ಎಂದು ಪ್ರತಿ‍ಪಾದಿಸಿದ ಅವರು, ‘ದೇಶದ ಕೃಷಿ ಸಮುದಾಯ ಬಿಕ್ಕಟ್ಟು ಎದುರಿಸುತ್ತಿದೆ. ಕೃಷಿ ಕ್ಷೇತ್ರದಲ್ಲಿ ದುಡಿಯುವವರ ಸಂಖ್ಯೆ ಗಣನೀಯವಾಗಿ ಕಡಿಮೆ ಆಗಿದೆ. ಕೃಷಿ ಬಿಕ್ಕಟ್ಟು ಬಗೆಹರಿಸುವ ಬಗ್ಗೆ ಸರ್ಕಾರಗಳು ಹೆಚ್ಚು ಗಮನ ಹರಿಸಬೇಕು’ ಎಂದು ಕಿವಿಮಾತು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.