ADVERTISEMENT

ವಿಧಾನ ಪರಿಷತ್ ಗಲಾಟೆ: ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ಚಿಂತನೆ

ಸಿಎಂ ಬಿಎಸ್‌ವೈ ಜತೆ ಹಿರಿಯ ಸಚಿವರ ಸಮಾಲೋಚನೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2020, 8:00 IST
Last Updated 15 ಡಿಸೆಂಬರ್ 2020, 8:00 IST
ವಿಧಾನಪರಿಷತ್‌ನಲ್ಲಿ ಆಡಳಿತ–ಪ್ರತಿಪಕ್ಷ ಸದಸ್ಯರ ವಾಗ್ವಾದ – ಪ್ರಜಾವಾಣಿ ಚಿತ್ರ
ವಿಧಾನಪರಿಷತ್‌ನಲ್ಲಿ ಆಡಳಿತ–ಪ್ರತಿಪಕ್ಷ ಸದಸ್ಯರ ವಾಗ್ವಾದ – ಪ್ರಜಾವಾಣಿ ಚಿತ್ರ   

ಬೆಂಗಳೂರು: ವಿಧಾನಪರಿಷತ್‌ನಲ್ಲಿ ನಡೆದ ಗದ್ದಲಕ್ಕೆ ಸಂಬಂಧಿಸಿ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಹಿರಿಯ ಸಚಿವರ ಸಭೆ ನಡೆಯುತ್ತಿದೆ.

ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಗೃಹಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಮಾಧುಸ್ವಾಮಿ, ಸಚಿವರಾದ ಅಶೋಕ್, ಸೋಮಣ್ಣ ಸೇರಿದಂತೆ ಹಿರಿಯ ಸಚಿವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಜತೆಗಿನ ಸಭೆಯಲ್ಲಿ ಭಾಗಿಯಾಗಿದ್ದಾರೆ.

ರಾಜಭವನನಕ್ಕೆ ತೆರಳಿ ದೂರು ನೀಡುವ ವಿಚಾರವಾಗಿ ಸಮಾಲೋಚನೆ ನಡೆಯುತ್ತಿದೆ.

‘ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದ ಕಾಂಗ್ರೆಸ್’: ‘ಮೇಲ್ಮನೆ ಅಂದರೆ ವಿದ್ಯಾವಂತರಿರುವುದು ಎಂಬ ನಂಬಿಕೆಯಿದೆ. ಅಲ್ಲಿ ಇಂತಹ ಗಲಾಟೆ ನಡೆದಿರುವುದು ಸರಿಯಲ್ಲ. ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿರುವುದೂ ಸರಿಯಲ್ಲ. ಕಾಂಗ್ರೆಸ್ ಸದಸ್ಯರು ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿದ್ದಾರೆ’ ಎಂದು ಸಚಿವ ಆರ್. ಅಶೋಕ ಟೀಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.