ADVERTISEMENT

ಬೆಂಗಳೂರಿನಲ್ಲಿ ಅಮೆರಿಕ ರಾಯಭಾರಿ ಕಚೇರಿ ಶೀಘ್ರ: ಪ್ರಿಯಾಂಕ್ ಖರ್ಗೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 23:30 IST
Last Updated 19 ಸೆಪ್ಟೆಂಬರ್ 2024, 23:30 IST
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ   

ನವದೆಹಲಿ: ಬೆಂಗಳೂರಿನಲ್ಲಿ ಅಮೆರಿಕ ರಾಯಭಾರಿ ಕಚೇರಿಯನ್ನು ಆದ್ಯತೆ ಮೇರೆಗೆ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭಾರತದಲ್ಲಿನ ಅಮೆರಿಕ ಸಂಯುಕ್ತ ಸಂಸ್ಥಾನಗಳ ರಾಯಭಾರಿ ಎರಿಕ್ ಗಾರ್ಸೆಟಿ ಅವರು ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಭರವಸೆ ನೀಡಿದ್ದಾರೆ.

ಗುರುವಾರ ಇಲ್ಲಿ ಗಾರ್ಸೆಟಿ ಅವರನ್ನು ಭೇಟಿ ಮಾಡಿದ ಪ್ರಿಯಾಂಕ್‌ ಬೆಂಗಳೂರಿನಲ್ಲಿ ರಾಯಭಾರಿ ಕಚೇರಿ ಆರಂಭ, ರಾಜ್ಯದಲ್ಲಿ ಬಂಡವಾಳ ಹೂಡಿಕೆ, ತಂತ್ರಜ್ಞಾನ ವಿನಿಮಯ ಸೇರಿದಂತೆ ಕೆಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.

‘ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆಯಿಂದ ಅಮೆರಿಕಕ್ಕೆ ಪಯಣ ಬೆಳೆಸುವವರು ಈಗ ಚೆನ್ನೈಗೆ ಹೋಗಬೇಕಿದೆ. ರಾಯಭಾರಿ ಕಚೇರಿ ತೆರೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಮನವಿ ಸಲ್ಲಿಸಿದ್ದಾರೆ’ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. 

ADVERTISEMENT

‘ಅಮೆರಿಕದಲ್ಲಿ ಅಧ್ಯಕ್ಷರ ಚುನಾವಣೆಯ ಪ್ರಕ್ರಿಯೆ ನಡೆಯುತ್ತಿದೆ. ಚುನಾವಣೆ ಮುಗಿದ ಕೂಡಲೇ ಆದ್ಯತೆಯ ಮೇರೆಗೆ ಬೆಂಗಳೂರಿನಲ್ಲಿ ರಾಯಭಾರ ಕಚೇರಿ ಆರಂಭಿಸಲಾಗುವುದು’ ಎಂದು ಗಾರ್ಸೆಟಿ ಭರವಸೆ ನೀಡಿದರು. 

ಕನ್ನಡಿಗರ ಬಹು ದಿನಗಳ ಕನಸು ಶೀಘ್ರದಲ್ಲೇ ಸಾಕಾರಗೊಳ್ಳಲಿದೆ ಎಂದು ಸಚಿವ ಪ್ರಿಯಾಂಕ್ ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.