ADVERTISEMENT

‘ಶಾಲೆಗೂ ಹೋಗಲಾಗ್ತಿಲ್ಲ; ನಮ್ಮೂರು ಸರಿ ಮಾಡ್ಸಿ ಪ್ಲೀಸ್..’

​ಪ್ರಜಾವಾಣಿ ವಾರ್ತೆ
Published 29 ಜುಲೈ 2021, 20:47 IST
Last Updated 29 ಜುಲೈ 2021, 20:47 IST
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ವಜ್ರಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳಚೆಯಲ್ಲಿ ಭೂಕುಸಿತದಿಂದ ಮನೆಗಳಿಗೆ ಹಾನಿಗೀಡಾದವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಪರಿಹಾರದ ಚೆಕ್ ವಿತರಿಸಿದರು. ಶಾಸಕ ಶಿವರಾಮ ಹೆಬ್ಬಾರ ಇದ್ದಾರೆ
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ವಜ್ರಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳಚೆಯಲ್ಲಿ ಭೂಕುಸಿತದಿಂದ ಮನೆಗಳಿಗೆ ಹಾನಿಗೀಡಾದವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಪರಿಹಾರದ ಚೆಕ್ ವಿತರಿಸಿದರು. ಶಾಸಕ ಶಿವರಾಮ ಹೆಬ್ಬಾರ ಇದ್ದಾರೆ   

ಕಾರವಾರ: ‘ಸರ್, ನಮ್ಮ ಮನೆ ಕುಸಿದಿದೆ. ಶಾಲೆಗೆ ಹೋಗಲಾಗ್ತಿಲ್ಲ. ನನ್ನ ವಿದ್ಯಾಭ್ಯಾಸದ ಗತಿಯೇನು..? ಏನಾದ್ರೂ ಮಾಡಿ ನಮ್ಮೂರು ಸರಿ ಮಾಡ್ಸಿ ಪ್ಲೀಸ್...'

ಯಲ್ಲಾಪುರ ತಾಲ್ಲೂಕಿನ ವಜ್ರಳ್ಳಿ ಗ್ರಾಮ ಪಂಚಾಯಿತಿಯ ಕಳಚೆಯಲ್ಲಿ ಆಗಿರುವ ಭಾರಿ ಭೂಕುಸಿತವನ್ನು ಪರಿಶೀಲಿಸಲು ಗುರುವಾರ ಆಗಮಿ ಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎದುರು ಹತ್ತನೇ ತರಗತಿ ವಿದ್ಯಾರ್ಥಿನಿ ವಾಣಿ ಗಜಾನನ ಭಟ್ ಕಣ್ಣೀರಿಡುತ್ತ ಅಳಲು ತೋಡಿಕೊಂಡಳು. ಅವಳನ್ನು ಸಮಾಧಾನಿಸಲು ಮುಖ್ಯಮಂತ್ರಿ ಪ್ರಯತ್ನಿಸಿದರು.

ಉತ್ತರ ಕನ್ನಡದ ವಿವಿಧಪ್ರವಾಹಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿದರು. ಅವರು ಹೋದಲ್ಲೆಲ್ಲ ಭೇಟಿಯಾದವರು ತಮ್ಮ ನೋವು, ಸಂಕಟಗಳನ್ನು ಹೇಳುತ್ತ ಕಣ್ಣೀರು ಸುರಿಸಿದರು.

ADVERTISEMENT

ಯಲ್ಲಾಪುರ ತಾಲ್ಲೂಕಿನ ತಳಕೇಬೈಲ್‌ನಲ್ಲಿ ರಾಜ್ಯ ಹೆದ್ದಾರಿ 6ರಲ್ಲಿ ಗುಡ್ಡ ಕುಸಿದಿದ್ದ ಜಾಗವನ್ನು ಪರಿಶೀಲಿಸಿದರು. ಇದೇ ವೇಳೆ, ಅಲ್ಲಿ ಸೇರಿದ್ದ 500-600 ಗ್ರಾಮಸ್ಥರು ಭೂಕುಸಿತದಿಂದ ಆಗಿರುವ ಹಾನಿಯನ್ನು ವಿವರಿಸಿದರು.

ಗ್ರಾಮಸ್ಥರ ನೋವಿನ ನುಡಿ ಆಲಿಸಿದ ಅವರು, ‘ನಿಮ್ಮೆಲ್ಲ ಕಷ್ಟಗಳೂ ನನಗೆ ಅರ್ಥವಾಗುತ್ತವೆ. ಅಧ್ಯಯನ ನಡೆಸಿ ಸೂಕ್ತ ಪರಿಹಾರದ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ' ಎಂದು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.