ADVERTISEMENT

ವಿವಸ್ತ್ರಗೊಳಿಸಿ ಹಲ್ಲೆ: ‘ಬುಲ್ಡೋಜರ್‌’ ಕಾರ್ಯಾಚರಣೆಗೆ ಸುನಿಲ್ ಕುಮಾರ್‌ ಆಗ್ರಹ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2023, 14:57 IST
Last Updated 12 ಡಿಸೆಂಬರ್ 2023, 14:57 IST
<div class="paragraphs"><p>ವಿ. ಸುನಿಲ್‌ ಕುಮಾರ್‌</p></div>

ವಿ. ಸುನಿಲ್‌ ಕುಮಾರ್‌

   

ವಿಧಾನಸಭೆ: ಬೆಳಗಾವಿ ತಾಲ್ಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಪ್ರೇಮಿಗಳು ಮನೆ ಬಿಟ್ಟು  ಹೋಗಿದ್ದರಿಂದ ರೋಷಗೊಂಡು ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಉತ್ತರ ಪ್ರದೇಶದ ಮಾದರಿಯಲ್ಲಿ ‘ಬುಲ್ಡೋಜರ್‌’ ಕಾರ್ಯಾಚರಣೆ ನಡೆಸಬೇಕು ಎಂದು ಬಿಜೆಪಿಯ ವಿ. ಸುನಿಲ್‌ ಕುಮಾರ್‌ ಆಗ್ರಹಿಸಿದರು.

ಮಂಗಳವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ವಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದಿರುವ ಹಲ್ಲೆ ಅತ್ಯಂತ ಅಮಾನವೀಯ. ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಘಟನೆಯಲ್ಲಿ ಭಾಗಿಯಾದವರ ಮನೆಗಳನ್ನು ಬುಲ್ಡೋಜರ್‌ಗಳಿಂದ ನೆಲಸಮಗೊಳಿಸಿ. ಆಗ ಮಾತ್ರ ಜನರಲ್ಲಿ ಕಾನೂನಿನ ಭಯ ಇರುತ್ತದೆ’ ಎಂದರು.

ADVERTISEMENT

ಬಿಜೆಪಿಯ ಶಶಿಕಲಾ ಜೊಲ್ಲೆ ಮತ್ತು ಆಡಳಿತ ಪಕ್ಷದ ಮುಖ್ಯ ಸಚೇತಕ ಅಶೋಕ ಪಟ್ಟಣ ಕೂಡ ಈ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಏಳು ಮಂದಿ ಬಂಧನ

ಉತ್ತರ ನೀಡಿದ ಗೃಹ ಸಚಿವ ಜಿ. ಪರಮೇಶ್ವರ, ‘ಘಟನೆ ನಡೆದ ಗ್ರಾಮಕ್ಕೆ  ಭೇಟಿ ನೀಡಿ ಪರಿಶೀಲಿಸಿದ್ದೇನೆ. ಹಲ್ಲೆಗೊಳಗಾಗಿರುವ ಮಹಿಳೆಯನ್ನೂ ಭೇಟಿಮಾಡಿ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದೇನೆ. ಪ್ರಕರಣದಲ್ಲಿ ಭಾಗಿಯಾದ ಏಳು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.