ಬೆಂಗಳೂರು: ರಾಜ್ಯ ಹೈಕೋರ್ಟ್‌ನಬೆಂಗಳೂರು ಪ್ರಧಾನ ಪೀಠ, ಧಾರವಾಡ ಮತ್ತು ಕಲುಬುರಗಿ ಪೀಠಗಳಿಗೆ ಇದೇ 24ರಿಂದ 2022ರ ಜನವರಿ 1ರವರೆಗೆ ಚಳಿಗಾಲದ ರಜೆ ಘೋಷಿಸಲಾಗಿದೆ.
ಬೆಂಗಳೂರು ಪ್ರಧಾನ ಪೀಠದಲ್ಲಿ ಮಾತ್ರ ರಜಾಕಾಲದ ನ್ಯಾಯಪೀಠಗಳುಇದೇ 27ರಂದು ಕಲಾಪ ನಡೆಸಲಿವೆ. ಪ್ರಕರಣದ ತುರ್ತು ಕಾರಣವನ್ನು ಅರ್ಜಿಯ ಮೊದಲ ಪ್ಯಾರಾದಲ್ಲಿ ಕಾಣಿಸಿದ್ದರೆ ಮಾತ್ರವೇ ವಿಚಾರಣೆಗೆ ಪರಿಗಣಿಸಲಾಗುತ್ತದೆ. ಧಾರವಾಡ ಮತ್ತು ಕಲಬುರಗಿ ನ್ಯಾಯಪೀಠಗಳಲ್ಲಿ ರಜಾಕಾಲದ ಪೀಠಗಳು ಕಾರ್ಯ ನಿರ್ವಹಿಸುವುದಿಲ್ಲ.
ಬೆಂಗಳೂರು ಪ್ರಧಾನ ಪೀಠದಲ್ಲಿ ಇದೇ 29ರಂದುಧಾರವಾಡ ಮತ್ತು ಕಲಬುರಗಿ ನ್ಯಾಯಪೀಠಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ವಿಡಿಯೊ ಕಾನ್ಫರೆನ್ಸ್ ಹೈಬ್ರಿಡ್ ಮಾದರಿ ಮೂಲಕ ವಿಚಾರಣೆ ನಡೆಸಲಾಗುತ್ತದೆ.
ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಎ.ಆರ್. ಹೆಗ್ಡೆ ಅವರ ವಿಭಾಗೀಯ ನ್ಯಾಯಪೀಠ, ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್, ನ್ಯಾಯಮೂರ್ತಿ ಇ.ಎಸ್. ಇಂದಿರೇಶ್, ನ್ಯಾಯಮೂರ್ತಿ ವಿ.ಶ್ರೀಷಾನಂದ ಮತ್ತು ನ್ಯಾಯಮೂರ್ತಿ ಎಂ.ಜಿ.ಎಸ್. ಕಮಾಲ್ ಅವರು ಏಕಸದಸ್ಯ ನ್ಯಾಯಪೀಠಗಳಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಹೈಕೋರ್ಟ್ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.