ಹರಿಹರ: ‘ಪಂಚಮಸಾಲಿ ಸಮಾಜಕ್ಕೆ 2 ‘ಎ’ ಮೀಸಲಾತಿ ಸಂಬಂಧ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ಸರ್ಕಾರಕ್ಕೆ ಗಡುವು ವಿಧಿಸುವುದು ಸರಿಯಲ್ಲ’ ಎಂದು ಇಲ್ಲಿನ ವೀರಶೈವ ಲಿಂಗಾಯಿತ ಪಂಚಮಸಾಲಿ ಪೀಠದ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.
‘ಸಮಾಜ ಹಾಗೂ ಪೀಠದ ಆಗ್ರಹದ ಮೇರೆಗೆ ರಾಜ್ಯ ಸರ್ಕಾರ ಕುಲಶಾಸ್ತ್ರೀಯ ಅಧ್ಯಯನಕ್ಕೆ ಆದೇಶಿಸಿದೆ. ಹಿಂದುಳಿದ ವರ್ಗಗಳ ಆಯೋಗ ಕುಲಶಾಸ್ತ್ರೀಯ ಅಧ್ಯಯನ ನಡೆಸುತ್ತಿದೆ. ಸಮಿತಿ ವರದಿ ಸಲ್ಲಿಸುವ ಮುಂಚೆಯೇ ಸರ್ಕಾರಕ್ಕೆ ಗಡುವು ವಿಧಿಸುವುದು ಸಲ್ಲ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.