ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಅಕ್ರಮವಾಗಿ ವರ್ಗಾವಣೆ ಮಾಡಿದ ಹಣವನ್ನು ವಾಪಸ್ ಪಡೆದು ನಿಗಮಕ್ಕೆ ಬಿಡುಗಡೆ ಮಾಡಬೇಕು ಮತ್ತು ಜನಾಂಗದ ಫಲಾನುಭವಿಗಳಿಗೇ ಹಂಚಬೇಕು ಎಂದು ಹರಿಹರ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಪ್ರಸನ್ನಾನಂದಪುರಿ ಸ್ವಾಮೀಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.
ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ವಾಲ್ಮೀಕಿ ಸಮುದಾಯದ ಶಾಸಕರು ಮತ್ತು ಮುಖಂಡರ ನಿಯೋಗದ ಸಭೆಯಲ್ಲಿ ಅವರು ಮಾತನಾಡಿದರು.
ಸಮುದಾಯದ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದ ಸಿದ್ದರಾಮಯ್ಯ, ಈ ವಿಚಾರವಾಗಿ ತಕ್ಷಣವೇ ಸಭೆ ಕರೆದು ಚರ್ಚಿಸಿ ಪರಿಹಾರ ಒದಗಿಸುವುದಾಗಿ ಹೇಳಿದರು.
ಶಾಸಕ ಬಿ.ಎಂ.ನಾಗರಾಜ, ಟಿ.ರಘುಮೂರ್ತಿ, ಬಸನಗೌಡ ತುರವೀಹಾಳ್, ರಾಜಾ ವೇಣುಗೋಪಾಲ ನಾಯಕ, ಡಾ.ಶ್ರೀನಿವಾಸ, ಲೋಕಸೇವಾ ಆಯೋಗದ ಮಾಜಿ ಸದಸ್ಯ ಜಿ.ಟಿ.ಚಂದ್ರಶೇಖರಪ್ಪ ಮತ್ತಿತರ ಮುಖಂಡರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.