ಬೆಂಗಳೂರು: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ದುಡಿದ ಐವರಿಗೆ 2024ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಪರಿಶಿಷ್ಟ ಪಂಗಡಗಳ ಇಲಾಖೆ ಪ್ರಕಟಿಸಿದೆ.
ಬುಡಕಟ್ಟು ಸಂಸ್ಕೃತಿ ಕ್ಷೇತ್ರದಲ್ಲಿ ಚಿತ್ರದುರ್ಗದ ಗಡ್ಡದಾರ ಹಟ್ಟಿಯ ಕಿಲಾರಿ ಜೋಗಯ್ಯ, ಸಾಮಾಜಿಕ ಕ್ಷೇತ್ರದಲ್ಲಿ ಚಾಮರಾಜನಗರದ ಗುಂಡ್ಲುಪೇಟೆಯ ಮದ್ದೂರು ಕಾಲೊನಿಯ ರತ್ನ ಎಸ್., ಬೆಳಗಾವಿಯ ರಾಜಶೇಖರ ತಳವಾರ, ಬೆಂಗಳೂರಿನ ಮಾಗಡಿ ರಸ್ತೆಯ ಕೆ.ಎಸ್.ಮೃತ್ಯುಂಜಯ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ರಂಗಭೂಮಿ ಕ್ಷೇತ್ರದಲ್ಲಿನ ಸೇವೆಗಾಗಿ ವಿಜಯನಗರದ ಹರಪನಹಳ್ಳಿಯ ಟೀಚರ್ಸ್ ಕಾಲೊನಿಯ ರತ್ನಮ್ಮ ಬಿ.ಸೋಗಿ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ವಿಜೇತರಿಗೆ ತಲಾ ₹5 ಲಕ್ಷ ನಗದು ಮತ್ತು 20 ಗ್ರಾಂ ಬಂಗಾರದ ಪದಕ ನೀಡಲಾಗುವುದು. ವಾಲ್ಮೀಕಿ ಜಯಂತಿಯ ಅಂಗವಾಗಿ ಗುರುವಾರ ವಿಧಾನಸೌಧದ ಬಾಂಕ್ವೆಟ್ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.