ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.
ಜಾರಿ ನಿರ್ದೇಶನಾಲಯವು ಈ ಪ್ರಕರಣದಲ್ಲಿ ನಾಗೇಂದ್ರ ಅವರನ್ನು ಜುಲೈ 18ರವರೆಗೆ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದೆ. ಮಂಜುಳಾ ಅವರನ್ನು ಬುಧವಾರ ಬೆಳಿಗ್ಗೆ, ಶಾಂತಿನಗರದಲ್ಲಿ ಇರುವ ಇ.ಡಿ ಕಚೇರಿಗೆ ಕರೆತರಲಾಗಿದೆ. ಅಲ್ಲಿಯೇ ವಿಚಾರಣೆ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.