ADVERTISEMENT

ವಾಲ್ಮೀಕಿ–ಸಿಬಿಐ ತನಿಖೆ ಕೋರಿಕೆ: ಹೈಕೋರ್ಟ್ ತೀರ್ಪು ನಾಳೆ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2024, 16:19 IST
Last Updated 11 ನವೆಂಬರ್ 2024, 16:19 IST
<div class="paragraphs"><p>ಹೈಕೋರ್ಟ್ </p></div>

ಹೈಕೋರ್ಟ್

   

ಬೆಂಗಳೂರು: ‘ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು’ ಎಂದು ಕೋರಿ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಸಲ್ಲಿಸಿದ್ದ ಅರ್ಜಿಯ ಮೇಲಿನ ತೀರ್ಪನ್ನು ಹೈಕೋರ್ಟ್ ಮಂಗಳವಾರ (ನ.12) ಪ್ರಕಟಿಸಲಿದೆ.

‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸಬೇಕು’ ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ರಿಟ್‌ ಅರ್ಜಿ (ಡಬ್ಲ್ಯು.ಪಿ.17274/2024) ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ 2024ರ ಸೆಪ್ಟೆಂಬರ್ 30ರಂದು ಮುಕ್ತಾಯಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ತೀರ್ಪು ಪ್ರಕಟಣೆಯನ್ನು ಮಂಗಳವಾರದ ದೈನಂದಿನ ಸೂಚಿತ ಪಟ್ಟಿಯಲ್ಲಿ ನಮೂದಿಸಲಾಗಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.