ADVERTISEMENT

ವಾಲ್ಮೀಕಿ ನಿಗಮ ಹಗರಣ: ತನಿಖಾ ವರದಿ ಸಲ್ಲಿಕೆಗೆ ಸಿಬಿಐಗೆ ಹೈಕೋರ್ಟ್‌ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2024, 15:56 IST
Last Updated 22 ನವೆಂಬರ್ 2024, 15:56 IST
<div class="paragraphs"><p>ಸಿಬಿಐ</p></div>

ಸಿಬಿಐ

   

ಬೆಂಗಳೂರು: ‘ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಿಕೊಂಡಿರುವ ಎಫ್‌ಐಆರ್‌ ಅನುಸಾರ ಈತನಕ ನಡೆಸಲಾಗಿರುವ ತನಿಖೆಯ ಪ್ರಗತಿ ವರದಿಯನ್ನು ಸಲ್ಲಿಸಿ’ ಎಂದು ಹೈಕೋರ್ಟ್‌, ಸಿಬಿಐಗೆ ನಿರ್ದೇಶಿಸಿದೆ.

ಈ ಸಂಬಂಧ ಬಿಜೆಪಿಯ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಮತ್ತು ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್‌ ಬಂಗಾರಪ್ಪ ಸಲ್ಲಿಸಿರುವ ರಿಟ್‌ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಶುಕ್ರವಾರ ವಿಚಾರಣೆ ನಡೆಸಿದರು.

ADVERTISEMENT

ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ವೆಂಕಟೇಶ್‌ ಪಿ.ದಳವಾಯಿ ವಾದ ಮಂಡಿಸಿ, ‘ಸಿಬಿಐ ತನಿಖೆಯನ್ನು ಹೈಕೋರ್ಟ್‌ ನಿಗಾದಲ್ಲಿಯೇ ನಡೆಸಬೇಕು. ಪ್ರತಿ ಹದಿನೈದು ದಿನಗಳಿಗೊಮ್ಮೆ ಸಿಬಿಐ ತನಿಖೆಯ ಪ್ರಗತಿ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಬೇಕು ಮತ್ತು ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶಿಸಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಈ ಮನವಿಯನ್ನು ಮಾನ್ಯ ಮಾಡಿದ ನ್ಯಾಯಪೀಠ, ತನಿಖೆಯ ಪ್ರಗತಿ ವರದಿಯನ್ನು ಸಲ್ಲಿಸುವಂತೆ ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್ ಅವರಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.