ADVERTISEMENT

ವಾಲ್ಮೀಕಿ ನಿಗಮದ ಹಣ ಚುನಾವಣೆಗೆ: ರಾಜ್ಯ ಸರ್ಕಾರದಿಂದ ಆಕ್ಷೇಪಣೆ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2024, 15:21 IST
Last Updated 4 ಸೆಪ್ಟೆಂಬರ್ 2024, 15:21 IST
<div class="paragraphs"><p>ವಿಧಾನಸೌಧ</p></div>

ವಿಧಾನಸೌಧ

   

ಬೆಂಗಳೂರು: ‘ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದ  ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿ ಚುನಾವಣೆಗೆ ದುರ್ಬಳಕೆ ಮಾಡಿಕೊಳ್ಳಲಾಗಿದೆ’ ಎಂಬ ಆರೋಪದ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಗೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಿದೆ.

ಈ ಸಂಬಂಧ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ADVERTISEMENT

ವಿಚಾರಣೆ ವೇಳೆ ಬ್ಯಾಂಕ್‌ ಪರ ಹಾಜರಾಗಿದ್ದ, ಅಟಾರ್ನಿ ಜನರಲ್‌ ಕೆ.ವೆಂಕಟರಮಣಿ ಅವರು, ‘ರಾಜ್ಯ ಸರ್ಕಾರ ಇನ್ನೂ ಆಕ್ಷೇಪಣೆ ಸಲ್ಲಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ’ ಎಂದರು.

ಇದಕ್ಕೆ ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ ಅವರು, ‘ಇವತ್ತು ಬೆಳಿಗ್ಗೆಯಷ್ಟೇ ಆಕ್ಷೇಪಣೆ ಸಲ್ಲಿಸಲಾಗಿದೆ’ ಎಂದರು. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಪರ ಹಿರಿಯ ವಕೀಲ ರವಿವರ್ಮ ಕುಮಾರ್‌ ‘ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ನೀಡಬೇಕು’ ಎಂದು ಕೋರಿದರು. ಎಲ್ಲರ ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 23ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.