ADVERTISEMENT

ವಾಲ್ಮೀಕಿ ನಿಗಮ ಹಗರಣ | ಬಡ್ಡಿ ಆಸೆಗೆ ಹಣ ಅಕ್ರಮ ವರ್ಗಾವಣೆ: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 6 ಜೂನ್ 2024, 23:41 IST
Last Updated 6 ಜೂನ್ 2024, 23:41 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಬೆಂಗಳೂರು: ‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ರೀತಿಯ ಹಣ ಅಕ್ರಮ ವರ್ಗಾವಣೆ ಪ್ರಕರಣಗಳು ಬಡ್ಡಿ ಆಸೆಗೆ ನಡೆಯುತ್ತಿವೆ. ಈ ವಿಚಾರದಲ್ಲಿ ಮುಖ್ಯಮಂತ್ರಿ ಮತ್ತು ಆರ್ಥಿಕ ಇಲಾಖೆಯವರು ಕೆಲವು ಸೂಚನೆಗಳನ್ನು ನೀಡಿದ್ದಾರೆ. ಎಲ್ಲ ನಿಗಮಗಳ ಅಧ್ಯಕ್ಷರನ್ನು ಕರೆದು ಚರ್ಚೆ ನಡೆಸಲಾಗುವುದು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.‌

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜೀನಾಮೆ ನೀಡುವಂತೆ ಸಚಿವ ನಾಗೇಂದ್ರ ಅವರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎನ್ನುವ ವರದಿ ಸುಳ್ಳು. ಪಕ್ಷಕ್ಕೆ ಮುಜುಗರ ಆಗುವುದು ಬೇಡ ಎನ್ನುವುದು ನಾಗೇಂದ್ರ ಅವರ ಅಭಿಲಾಷೆ. ಆದ ಕಾರಣ ರಾಜೀನಾಮೆ ನೀಡುತ್ತೇನೆಂದು ನಮಗೆ ಹೇಳಿದ್ದರು’ ಎಂದರು.

‘ಸಚಿವರ ಗಮನಕ್ಕೆ ಬಾರದೆ ಅಧಿಕಾರಿಗಳು ಅಕ್ರಮ ಎಸಗುತ್ತಿದ್ದಾರೆಯೇ’ ಎಂದು ಕೇಳಿದಾಗ, ‘ಆಡಳಿತ ಮಂಡಳಿಯ ನಿರ್ಣಯ ಇಲ್ಲದೆ ಒಂದು ಬ್ಯಾಂಕಿನ ಖಾತೆಯಿಂದ ಮತ್ತೊಂದು ಖಾತೆಗೆ ಹಣ ವರ್ಗಾವಣೆ ಮಾಡಲು ಆಗುವುದಿಲ್ಲ. ನಾನು ಇಂಧನ ಸಚಿವನಾಗಿದ್ದಾಗ ಅನೇಕ ಬ್ಯಾಂಕಿನವರು ಬಂದು ನಮ್ಮಲ್ಲಿ ಠೇವಣಿ ಇಡುವಂತೆ ಕೇಳುತ್ತಿದ್ದರು. ನಾನು ಇದಕ್ಕೆಲ್ಲ ಪ್ರತಿಕ್ರಿಯೆ ನೀಡುತ್ತಿರಲಿಲ್ಲ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.