ಬೆಂಗಳೂರು: ‘ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ; ನಿಗಮದ ಮಾಜಿ ವ್ಯವಸ್ಥಾಪಕ ಜೆ.ಬಿ.ಪದ್ಮನಾಭ, ಹೈದರಾಬಾದ್‌ನ ಮಧ್ಯವರ್ತಿ ಎಂ.ಚಂದ್ರಮೋಹನ್, ಉಡುಪಿಯ ಜಿ.ಕೆ.ಜಗದೀಶ್ ಮತ್ತು ಆಂಧ್ರಪ್ರದೇಶದ ಕಾಕಿ ಶ್ರೀನಿವಾಸ್ ರಾವ್ ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಇದೇ 28ಕ್ಕೆ ನಿಗದಿಪಡಿಸಿದೆ.
ಈ ನಾಲ್ಕೂ ಜಾಮೀನು ಅರ್ಜಿಗಳು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠದಲ್ಲಿ ಗುರುವಾರ ವಿಚಾರಣೆಗೆ ನಿಗದಿಯಾಗಿದ್ದವು. ವಿಚಾರಣೆ ವೇಳೆ ಎಸ್‌ಐಟಿ ಪರ ಹಾಜರಾಗಿದ್ದ ವಿಶೇಷ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್, ‘ಈ ಪ್ರಕರಣದಲ್ಲಿನ ಮತ್ತೊಬ್ಬ ಆರೋಪಿ ತೇಜ ತಮ್ಮಯ್ಯ ಅವರೂ ಜಾಮೀನು ಕೋರಿದ್ದಾರೆ. ಆದ್ದರಿಂದ, ಎಲ್ಲಾ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆಗೆ ನಿಗದಿಗೊಳಿಸಬೇಕು’ ಎಂದು ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಎಲ್ಲಾ ಪ್ರಕರಣಗಳನ್ನು ಒಟ್ಟಾಗಿ ವಿಚಾರಣೆಗೆ ನಿಗದಿಗೊಳಿಸಲು ರಿಜಿಸ್ಟ್ರಿಗೆ ಆದೇಶಿಸಿ, ವಿಚಾರಣೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.