ADVERTISEMENT

ವಾಲ್ಮೀಕಿ ನಿಗಮ ಪ್ರಕರಣ: ED ವಿರುದ್ಧ FIR ರದ್ದುಕೋರಿ ಹೈಕೋರ್ಟ್‌ನಲ್ಲಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 23 ಜುಲೈ 2024, 5:59 IST
Last Updated 23 ಜುಲೈ 2024, 5:59 IST
   

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹94.73 ಕೋಟಿ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆರೋಪಿಯನ್ನಾಗಿಸಲು ಒತ್ತಡ ಹೇರುತ್ತಿರುವ ಆರೋಪದಡಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ವಿರುದ್ಧ ನಗರದ ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಇ.ಡಿ (ಜಾರಿ ನಿರ್ದೇಶನಾಲಯ) ಹೈಕೋರ್ಟ್ ಮೆಟ್ಟಿಲೇರಿದೆ.

ಈ ಸಂಬಂಧ ಇ.ಡಿ ಪರ ವಕೀಲ ಮಧುಕರ ದೇಶಪಾಂಡೆ ಅವರು ಬೆಳಗ್ಗೆ 10.30ಕ್ಕೆ ಕೋರ್ಟ್ ಕಲಾಪ ಆರಂಭವಾಗುತ್ತಿದ್ದಂತೆಯೇ, ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮೆಮೊ ಸಲ್ಲಿಸಿದರು. ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ನ್ಯಾಯಮೂರ್ತಿಗಳಿಗೆ ಮನವಿ ಮಾಡಿದರು.

ಇದನ್ನು ಮನ್ನಿಸಿದ ನ್ಯಾಯಮೂರ್ತಿಗಳು ಇಂದೇ ಮಧ್ಯಾಹ್ನ 2.30ಕ್ಕೆ ವಿಚಾರಣಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದರು. ಇ.ಡಿ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಅರವಿಂದ ಕಾಮತ್ ವಾದ ಮಂಡಿಸಲಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.