ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ (ವಿಎಒ) ಹುದ್ದೆಗಳ ನೇಮಕಾತಿಗಾಗಿ ನಡೆಸಿದ್ದ ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ.
ಒಂದು ಸಾವಿರ ಹುದ್ದೆಗಳ ನೇಮಕಕ್ಕೆ ಅ.10ರಂದು ಪರೀಕ್ಷೆ ನಡೆಸಲಾಗಿತ್ತು. ಕೀ ಉತ್ತರಗಳಿಗೆ ಬಂದ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಿಸಿದ ನಂತರ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.