ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಆ.29ಕ್ಕೆ ಚುನಾವಣೆ ನಡೆಯಲಿದ್ದು, ವೇಳಾಪಟ್ಟಿ ಪ್ರಕಟಿಸಲಾಗಿದೆ.
ಜುಲೈ 21ರಂದು ತಾಲ್ಲೂಕು, ಮಹಾನಗರ, ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆ, ಆ.25ರಂದು ರಾಜ್ಯ ಘಟಕಗಳ ಅಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಮಹಾಸಭಾದ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ.
ಮತದಾರರ ಪಟ್ಟಿಯನ್ನು ಜೂನ್ 20ರಂದು ಪ್ರಕಟಿಸಲಾಗುತ್ತದೆ. ಮೂರು ಹಂತಗಳಲ್ಲಿ ನಡೆಯುವ ಚುನಾವಣೆಗೆ ಮೊದಲ ಹಂತದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಜೂನ್ 27ರಿಂದ ಆರಂಭವಾಗಲಿದೆ. ಸೆ. 29ರಂದು ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ. ಆಯ್ಕೆಯಾಗುವ ಹೊಸ ಸಮಿತಿಗಳು 2024-2025ನೇ ಸಾಲಿನಿಂದ 2028-2029ರ ಅವಧಿಗೆ ಕಾರ್ಯನಿರ್ವಹಿಸಲಿವೆ ಎಂದು ಚುನಾವಣಾಧಿಕಾರಿಯಾಗಿ ನೇಮಕಗೊಂಡಿರುವ ನಿವೃತ್ತ ಐಎಎಸ್ ಅಧಿಕಾರಿ ಎಂ.ಬಿ. ದ್ಯಾಬೇರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.