ADVERTISEMENT

ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಆರೋಗ್ಯ ಸ್ಥಿರ: ಮಣಿಪಾಲ್ ಆಸ್ಪತ್ರೆ

ಚಿಕಿತ್ಸೆಗಾಗಿ ಏಪ್ರಿಲ್‌ 29ರಂದು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಪಿಟಿಐ
Published 13 ಮೇ 2024, 7:54 IST
Last Updated 13 ಮೇ 2024, 7:54 IST
<div class="paragraphs"><p>ಎಸ್‌.ಎಂ. ಕೃಷ್ಣ</p></div>

ಎಸ್‌.ಎಂ. ಕೃಷ್ಣ

   

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ಆರೋಗ್ಯ ಸ್ಥಿತಿ ಬಗ್ಗೆ ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.

ಆಸ್ಪತ್ರೆ ಪ್ರಕಾರ ಕೃಷ್ಣ ಅವರ ಆರೋಗ್ಯ ಸ್ಥೀರವಾಗಿದ್ದು ಚಿಕಿತ್ಸೆಗೆ ಸಾಕಷ್ಟು ಸ್ಪಂದಿಸುತ್ತಿದ್ದಾರೆ. ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಮಣಿಪಾಲ್‌ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

ADVERTISEMENT

ವಯೋಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಕೃಷ್ಣ ಅವರನ್ನು ಚಿಕಿತ್ಸೆಗಾಗಿ ಏಪ್ರಿಲ್ 21ರಂದು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಏಪ್ರಿಲ್‌ 29ರಂದು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಡಾ. ಸತ್ಯನಾರಾಯಣ ಮೈಸೂರು ಮತ್ತು ಡಾ. ಸುನಿಲ್‌ ಕಾರಂತ್‌ ನೇತೃತ್ವದ ವೈದ್ಯರ ತಂಡವು ಕೃಷ್ಣ ಅವರಿಗೆ ಚಿಕಿತ್ಸೆ ನೀಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.