ಮಂಗಳೂರು: ರಾಮ ಮಂದಿರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿರ್ಣಯದ ನಂತರ ಮೊದಲ ಬಾರಿಗೆ ವಿಶ್ವ ಹಿಂದೂ ಪರಿಷತ್ ಅಂತರರಾಷ್ಟ್ರೀಯ ಕಾರ್ಯಕಾರಿ ಸಭೆ ನಡೆಯುತ್ತಿದ್ದು, ರಾಮ ಮಂದಿರ ನಿರ್ಮಾಣದ ಕುರಿತು ಮಹತ್ವದ ಚರ್ಚೆ ನಡೆಯಲಿದೆ ಎಂದು ಪರಿಷತ್ ಪ್ರಧಾನ ಕಾರ್ಯದರ್ಶಿ ಮಿಲಿಂದ ಪರಾಂಡೆ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣ ಹಿಂದೂಗಳ ನಂಬಿಕೆ, ಶ್ರದ್ಧೆಯ ವಿಷಯವಾಗಿದ್ದು, ಸರ್ಕಾರಿ ಟ್ರಸ್ಟ್ ಆಗಬಾರದು. ಸ್ವತಂತ್ರ ಟ್ರಸ್ಟ್ ರಚನೆ ಆಗಬೇಕು. ಅಲ್ಲಿ ಸಂಗ್ರಹಿಸಿರುವ ಕಲ್ಲುಗಳಿಂದಲೇ ಮಂದಿರ ಆಗಬೇಕು. ಸಾರ್ವಜನಿಕರ ಹಣದಲ್ಲಿಯೇ ಮಂದಿರ ನಿರ್ಮಾಣ ಆಗಬೇಕು. ಈ ಎಲ್ಲ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ದೇಶ ವಿಭಜನೆಯ ಸಂದರ್ಭದಲ್ಲಿ ಹಿಂದೂಗಳಿಗೆ ಆದ ಅನ್ಯಾಯವನ್ನು ಸರಿಪಡಿಸುವ ಕೆಲಸವನ್ನು ಪೌರತ್ವ ತಿದ್ದುಪಡಿ ಕಾಯ್ದೆಯ ಮೂಲಕ ಕೇಂದ್ರ ಸರ್ಕಾರ ಮಾಡಿದೆ. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಹೇಳಿದರು.
ಸಿಎಎ ಮುಸ್ಲಿಮರ ವಿರೋಧಿಯಲ್ಲ. ಈ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ. ಹಲವಾರು ವಿಷಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚಿಸಿ ಯೋಜನೆ ರೂಪಿಸಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.