ಬೆಂಗಳೂರು: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಅವರ ಪತ್ನಿ ಸುದೇಶ್ ಧನಕರ್ ಅವರು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಶನಿವಾರ ಭೇಟಿ ನೀಡಿದರು.
ಅಲ್ಲಿಯೇ ಒಂದು ತಾಸಿಗೂ ಹೆಚ್ಚು ಇದ್ದ ಧನಕರ್ ದಂಪತಿ, ದೇವೇಗೌಡ ಅವರ ಕುಟುಂಬದ ಸದಸ್ಯರೊಂದಿಗೆ ಉಪಹಾರ ಸೇವಿಸಿದರು. ಚನ್ನಮ್ಮ ದೇವೇಗೌಡ ಅವರ ಯೋಗಕ್ಷೇಮ ವಿಚಾರಿಸಿದರು.
‘ಚನ್ನಮ್ಮ ಅವರ ಆರೋಗ್ಯ ಸುಧಾರಿಸಿದ ನಂತರ ಅವರನ್ನು ದೆಹಲಿಗೆ ಕರೆದುಕೊಂಡು ಬನ್ನಿ ಎಂದು ದೇವೇಗೌಡ ಅವರಿಗೆ ಹೇಳಿದರು. ಕೃಷಿ ಮತ್ತು ರೈತರ ಸಮಸ್ಯೆಗಳು ಸೇರಿ ಹಲವು ವಿಷಯಗಳ ಬಗ್ಗೆ ಚರ್ಚಿಸಿದರು’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.