ADVERTISEMENT

ವಿಧಾನ ಪರಿಷತ್‌ ಚುನಾವಣೆ: ಇಂದಿನಿಂದ ನಾಮಪತ್ರ

​ಪ್ರಜಾವಾಣಿ ವಾರ್ತೆ
Published 9 ಮೇ 2024, 1:00 IST
Last Updated 9 ಮೇ 2024, 1:00 IST
   

ಬೆಂಗಳೂರು: ಪದವೀಧರರ ಮೂರು ಹಾಗೂ ಶಿಕ್ಷಕರ ಮೂರು ಕ್ಷೇತ್ರಗಳಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಮೇ 9ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಈಶಾನ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಗಳಲ್ಲಿ ಜೂನ್‌ 3ರಂದು ಮತದಾನ ನಡೆಯಲಿದೆ. 

ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನ. 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮೇ 20ರವರೆಗೆ ಅವಕಾಶವಿದೆ. ಜೂನ್‌ 6ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.  

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.