ಬೆಂಗಳೂರು: ‘ಗ್ಯಾರಂಟಿ ಯೋಜನೆಗಳಿಗಾಗಿ ಸಂಪನ್ಮೂಲ ಕ್ರೋಡೀಕರಣ ಹಾಗೂ ಹೆಚ್ಚು ಆದಾಯ ಬರುವ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುತ್ತಿದೆ. ಆಸ್ತಿಗಳ ನಗದೀಕರಣದ ಯಾವುದೇ ಪ್ರಸ್ತಾವ ಇಲ್ಲ’ ಎಂದು ವಿಧಾನ ಪರಿಷತ್ ಸಭಾ ನಾಯಕ ಎನ್.ಎಸ್. ಬೋಸರಾಜು ಸ್ಪಷ್ಟಪಡಿಸಿದರು.
ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಪರವಾಗಿ ಉತ್ತರಿಸಿದ ಅವರು, ‘ಆರ್ಥಿಕ ಇಲಾಖೆಯು ವಿವಿಧ ಇಲಾಖೆಗಳು ಮತ್ತು ಅವುಗಳ ಅಧೀನದ ನಿಗಮ, ಮಂಡಳಿ, ಪ್ರಾಧಿಕಾರಗಳ ಆಸ್ತಿಗಳ ಮಾಹಿತಿಯ ಸಂಗ್ರಹಿಸಲು ಸಮಗ್ರ ಪಟ್ಟಿ ಸಿದ್ಧಪಡಿಸುವಂತೆ ಆಂತರಿಕ ಸುತ್ತೋಲೆ ಕಳುಹಿಸಿದೆ. ಎಲ್ಲ ಸರ್ಕಾರಗಳ ಅವಧಿಯಲ್ಲಿ ನಡೆಯುವ ಸಾಮಾನ್ಯ ಪ್ರಕ್ರಿಯೆಯಿದು’ ಎಂದರು.
‘ಒಂದೊಮ್ಮೆ ಆಸ್ತಿಗಳ ನಗದೀಕರಣ ಮಾಡುವುದಾದರೆ, ಸಂಪುಟ ಸಭೆಯಲ್ಲಿ ಆ ವಿಚಾರವನ್ನು ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ’ ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.