ಬೆಂಗಳೂರು: ತಮ್ಮ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದ್ದರಿಂದ ಮನನೊಂದು ಹಾವೇರಿ ಜಿಲ್ಲೆಯ ಹರನಗಿ ಗ್ರಾಮದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ‘ಎಕ್ಸ್’ನಲ್ಲಿ ಹಾಕಿದ ಪೋಸ್ಟ್ ತೀವ್ರ ಟೀಕೆಗೆ ಗುರಿಯಾಗಿದೆ.
‘ಹಾವೇರಿಯಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದು 2022ರಲ್ಲಿ. ಆಗ ನಿಮ್ಮದೇ ಪಕ್ಷ ಬಿಜೆಪಿಯ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದರು. ಈ ಕುರಿತು ಸ್ವತಃ ಹಾವೇರಿ ಎಸ್‌ಪಿ ಅವರೇ ಸ್ಪಷ್ಟನೆ ನೀಡಿದ್ದಾರೆ’ ಎಂದು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.
ಟೀಕೆಯ ನಂತರ ತೇಜಸ್ವಿ ಸೂರ್ಯ ಪೋಸ್ಟ್ ಅಳಿಸಿದ್ದಾರೆ. ಆದರೆ, ವಿಜಯೇಂದ್ರ ಪೋಸ್ಟ್ ‘ಎಕ್ಸ್’ನಲ್ಲಿ ಹಾಗೆಯೇ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.