ಬೆಂಗಳೂರು: ಗ್ರಾಮೀಣ ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ‘ಹಳ್ಳಿಗಳ ಅಭಿವೃದ್ಧಿ ಯೋಜನೆ (ವಿಡಿಪಿ) ಸಿದ್ಧಪಡಿಸಿ, ಸರ್ಕಾರಕ್ಕೆ ಸಲ್ಲಿಸಲಾಗುತ್ತಿದೆ ಎಂದು ಕೆಎಸ್‌ಎಸ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನ ಪ್ರಾಂಶುಪಾಲ ಕೆ. ರಾಮನರಸಿಂಹ ಹೇಳಿದರು.
ಕೇಂದ್ರ ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯ, ಉನ್ನತ ಭಾರತ ಅಭಿಯಾನದ ಸಹಯೋಗದಲ್ಲಿ ಕಗ್ಗಲೀಪುರ ಗ್ರಾಮ ಪಂಚಾಯಿತಿಗೆ ಒಳಪಟ್ಟ ಉತ್ತರಿ, ಕಗ್ಗಲೀಪುರ ಹಾಗೂ ಒ.ಬಿ. ಚೂಡಹಳ್ಳಿಯ ಮನೆಗಳಲ್ಲಿ ವಿದ್ಯಾರ್ಥಿಗಳು ಸಮೀಕ್ಷೆ ನಡೆಸಿದ ನಂತರ ಅವರು ಮಾಹಿತಿ ನೀಡಿದರು.
ಹಳ್ಳಿಗಳಲ್ಲಿ ಹಲವು ಸಮಸ್ಯೆಗಳು ಇಂದಿಗೂ ಜೀವಂತವಾಗಿವೆ. ದಶಕಗಳ ಸಮಸ್ಯೆಗೆ ಪರಿಹಾರ ದೊರೆತಿಲ್ಲ. ಮೊದಲ ಹಂತದಲ್ಲಿ ದತ್ತು ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಸಮೀಕ್ಷೆ ನಡೆಸಲಾಗಿದೆ. ಭಾರತೀಯ ವಿಜ್ಞಾನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕರಾದ ಕೆ.ಎಸ್. ಜಗದೀಶ್, ಬಿ.ಕೆ. ರಘುಪ್ರಸಾದ್ ಮಾರ್ಗದರ್ಶನದಲ್ಲಿ ಶಿಸ್ತುಬದ್ಧ, ವೈಜ್ಞಾನಿಕ ಸಮೀಕ್ಷಾ ವರದಿ ಸಿದ್ಧಪಡಿಸಲಾಗಿದೆ. ಪರಿಹಾರಾತ್ಮಕ ಅಂಶಗಳನ್ನು ಒಳಗೊಂಡ ಈ ವರದಿಯನ್ನು ಶೀಘ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.
ಕಮ್ಮವಾರಿ ಸಂಘದ ಅಧ್ಯಕ್ಷ ಆರ್. ರಾಜಗೋಪಾಲ್ ನಾಯ್ಡು, ಕಾರ್ಯದರ್ಶಿ ಲೀಲಾ ಶಂಕರ್‌ರಾವ್, ಖಜಾಂಚಿ ಟಿ.ನೀರಜಾಕ್ಷುಲು ನಾಯ್ಡು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ವಿ.ಎ. ಬಾಲಾಜಿ, ಎಂಜಿನಿಯರ್ ವಿಜಯಲಕ್ಷ್ಮಿ ಅಕೆಲ್ಲಾ, ಕಗ್ಗಲೀಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಫರ್ವೀಜ್, ಸದಸ್ಯರಾದ ಅನುಪಾ, ಲಕ್ಷ್ಮೀ ನಾರಾಯಣ್, ಸಿ.ಕೆ. ವಿಶ್ವನಾಥ್ ಮತ್ತಿತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.