ADVERTISEMENT

Video | ಕರ್ತವ್ಯ ಪಥದಲ್ಲಿ ಖೇಲ್ ರತ್ನ, ಅರ್ಜುನ ಪ್ರಶಸ್ತಿ ಇಟ್ಟ ವಿನೇಶಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಡಿಸೆಂಬರ್ 2023, 2:39 IST
Last Updated 31 ಡಿಸೆಂಬರ್ 2023, 2:39 IST

ಅಂತರರಾಷ್ಟ್ರೀಯ ಕುಸ್ತಿಪಟು ವಿನೇಶಾ ಪೋಗಟ್ ತಮ್ಮ ಸಾಧನೆ ಗುರುತಿಸಿ ಸರ್ಕಾರ ನೀಡಿದ್ದ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ಕರ್ತವ್ಯ ಪಥದಲ್ಲಿ ಇಟ್ಟು ಶನಿವಾರ ಮರಳಿದ್ದಾರೆ. ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯು ಎಫ್ಐ) ಅಧ್ಯಕ್ಷ ಸ್ಥಾನಕ್ಕೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಆಯ್ಕೆಯನ್ನು ಪ್ರತಿಭಟಿಸಿ ಕುಸ್ತಿಪಟು ವಿನೇಶಾ ಪೋಗಟ್ ಅವರು ಪ್ರಶಸ್ತಿಗಳನ್ನು ಮರಳಿಸುವುದಾಗಿ ಮಂಗಳವಾರ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.