ಬೆಂಗಳೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕವಿತಾ ರೆಡ್ಡಿ ಅವರನ್ನು ಕಾಂಗ್ರೆಸ್‌ನಿಂದ ಅಮಾನತು ಮಾಡಲಾಗಿದೆ.
ಪಕ್ಷದ ನಿರ್ಣಯಗಳನ್ನು ಸಾರ್ವಜನಿಕವಾಗಿ ಪ್ರಶ್ನಿಸಿ ಮತ್ತು ಟೀಕಿಸಿ, ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಕಾರಣಕ್ಕೆ ಅವರನ್ನು ಪಕ್ಷದಿಂದ ಮತ್ತು ಪಕ್ಷದಲ್ಲಿ ಅವರಿಗೆ ನೀಡಲಾಗಿದ್ದ ಎಲ್ಲ ಹುದ್ದೆಗಳಿಂದ ಅಮಾನತು ಮಾಡಲಾಗಿದೆ ಎಂದು ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಹೇಳಿದೆ.
ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಯನ್ನು ಪ್ರಶ್ನಿಸಿ ಅವರು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು. ಪಕ್ಷಕ್ಕೆ ಸಂಬಂಧಿಸಿದ ವಿಚಾರಗಳನ್ನು ಬಹಿರಂಗವಾಗಿ ಚರ್ಚಿಸಬೇಡಿ ಎಂದು ಆಗ ಎಚ್ಚರಿಕೆ ನೀಡಲಾಗಿತ್ತು. ಆದರೆ ಈಗ ಕೆಪಿಸಿಸಿ ಮಹಿಳಾ ಘಟಕಕ್ಕೆ ಸೌಮ್ಯಾ ರೆಡ್ಡಿ ಅವರ ನೇಮಕವನ್ನು ಬಹಿರಂಗವಾಗಿ ಟೀಕಿಸಿದ್ದರು ಎಂದು ಮೂಲಗಳು ಹೇಳಿವೆ.
ಶಿಸ್ತು ಉಲ್ಲಂಘನೆ ಬಗ್ಗೆ ವಿವರಣೆ ನೀಡುವಂತೆ ನೋಟಿಸ್ ನೀಡಲಾಗಿತ್ತು. ಈಚೆಗೆ ನಡೆದ ಸಭೆಯಲ್ಲಿ ಅವರನ್ನು ಅಮಾನತು ಮಾಡುವಂತೆ ನಿರ್ಣಯ ಕೈಗೊಳ್ಳಲಾಯಿತು ಮೂಲಗಳು ತಿಳಿಸಿವೆ.
ಮಾತು ನಿಲ್ಲಿಸುವುದಿಲ್ಲ: ‘ನನ್ನಂತ ಮಹಿಳೆ, ಅತ್ಯಂತ ಪ್ರಭಾವಿಶಾಲಿಗಳಿಗೂ ಹೆದರುವುದಿಲ್ಲ. ಲಿಂಗ ತಾರತಮ್ಯ ಮತ್ತು ಅನ್ಯಾಯದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಮಾತನಾಡುವುದನ್ನು ನಿಲ್ಲಿಸುವುದಿಲ್ಲ’ ಎಂದು ಕವಿತಾ ರೆಡ್ಡಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ನ್ಯಾಯ ನಿರೀಕ್ಷಿಸಲು ಸಾಧ್ಯವಿಲ್ಲ. ಸಿದ್ಧಾಂತಕ್ಕೆ ಕಟ್ಟುಬಿದ್ದ ಮಹಿಳೆ ಮೇಲಾಗುವ ದೌರ್ಜನ್ಯ ರಾಹುಲ್ ಗಾಂಧಿಗೆ ಅರ್ಥವಾಗಬಹುದೇನೋಕವಿತಾ ರೆಡ್ಡಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.