ಬೆಂಗಳೂರು: ‘ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವು ಒದಗಿಸಿಕೊಡಬೇಕು’ ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
‘ರಾಜ್ಯದಲ್ಲಿ ಈ ವರ್ಷ ಭಾರಿ ಮಳೆಯಾಗುತ್ತಿದೆ. ಪ್ರವಾಹದಿಂದ ನದಿಗಳು ಉಕ್ಕಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿ ನೀರಿನ ಹೊರ ಹರಿವು ಹೆಚ್ಚಾದ ಪರಿಣಾಮ ನೆರೆ ಪರಿಸ್ಥಿತಿ ಎದುರಾಗಿದೆ. ನದಿಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆ ಹಾನಿಗಳ ಬಗ್ಗೆ ವರದಿಯಾಗುತ್ತಿದೆ. ಇಂತಹ ಕಷ್ಟದ ಸಮಯದಲ್ಲಿ ಜನರ ಜೊತೆ ನಿಲ್ಲಬೇಕಿರುವುದು ಸರ್ಕಾರದ ಕರ್ತವ್ಯ. ಹೀಗಾಗಿ ಸಚಿವರು ತಮ್ಮ ಕ್ಷೇತ್ರ ವ್ಯಾಪ್ತಿ ಹಾಗೂ ಇತರ ಪ್ರವಾಹಪೀಡಿತ ಪ್ರದೇಶಗಳ ಶಾಸಕರ ಸಂಪರ್ಕದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಸ್ವೀಕರಿಸಬೇಕು. ಸಂತ್ರಸ್ತರ ನೆರವಿಗೆ ಧಾವಿಸಬೇಕು’ ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.