ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) 2023–24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ಸೆ.4 ರಿಂದಲೇ ಎಂಜಿನಿಯರಿಂಗ್ ಕಾಲೇಜುಗಳ ಮೊದಲ ಸೆಮಿಸ್ಟರ್ ತರಗತಿಗಳು ಆರಂಭವಾಗಲಿವೆ.
ಮೊದಲ 10 ದಿನಗಳು ವಿದ್ಯಾರ್ಥಿಗಳಿಗೆ ಪುನಶ್ಚೇತನ ತರಗತಿಗಳು ನಡೆಯಲಿವೆ. ಸೆ.15ರಿಂದ ಅಧಿಕೃತವಾಗಿ ಮೊದಲ ಸೆಮಿಸ್ಟರ್ ಪಾಠಗಳು ಆರಂಭವಾಗಲಿವೆ. ಜ.6ರ ಒಳಗೆ ಬೋಧನಾ ಕಾರ್ಯ ಪೂರ್ಣಗೊಳಿಸಬೇಕು. ಜ.8 ರಿಂದ 19ರವರೆಗೆ ಪ್ರಾಯೋಗಿಕ ಪರೀಕ್ಷೆಗಳು, 22 ರಿಂದ ಫೆ.17ರವರೆಗೆ ಲಿಖಿತ ಪರೀಕ್ಷೆಗಳು ನಡೆಯಲಿವೆ. ಫೆ. 19ರಿಂದ ಎರಡನೇ ಸೆಮಿಸ್ಟರ್ ಆರಂಭವಾಗಲಿವೆ.
ಖಾಸಗಿ ಕಾಲೇಜುಗಳ ವಿರುದ್ಧ ಪೋಷಕರ ದೂರು:
ಎಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಆ.30 ರಿಂದ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಲಿದೆ. ಸೆ.4 ರಂದು ಪರೀಕ್ಷಾ ಪ್ರಾಧಿಕಾರ ಈ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸುತ್ತಿದೆ. ಆದರೆ, ಖಾಸಗಿ ಕಾಲೇಜುಗಳು ಈಗಾಗಲೇ ತರಗತಿಗಳನ್ನು ಆರಂಭಿಸಿದ್ದು, ತಡವಾಗಿ ಪ್ರವೇಶ ಪಡೆಯುವ ಮಕ್ಕಳಿಗೆ ಅನ್ಯಾಯವಾಗುತ್ತದೆ ಎಂದು ಹಲವು ಪೋಷಕರು ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.