ಬೆಂಗಳೂರು: ರಾಜ್ಯದ ಸಹಕಾರ ಬ್ಯಾಂಕುಗಳಿಂದ ಸಾಲ ಪಡೆದು 2023ರ ಡಿ. 31ರವರೆಗೆ ಸುಸ್ತಿಯಾಗಿರುವ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಆಧಾರಿತ ಸಾಲಗಳ ಕಂತುಗಳ ಅಸಲು ಪಾವತಿಸಿದರೆ, ಆ ಮೊತ್ತಕ್ಕೆ ಬಾಕಿ ಇರುವ ಬಡ್ಡಿ ಮನ್ನಾ ಮಾಡುವ ಅವಧಿಯನ್ನು ಮಾರ್ಚ್ 31ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸುಸ್ತಿ ಸಾಲವನ್ನು ಫೆ. 29ರ ಒಳಗೆ ಮರುಪಾವತಿಸಿದರೆ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಈ ಹಿಂದೆ ತಿಳಿಸಲಾಗಿತ್ತು.
ಪ್ರಾಥಮಿಕ ಪತ್ತಿನ ಕೃಷಿ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು, ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಪಡೆದ ಸಾಲಕ್ಕೆ ಮಾತ್ರ ಈ ಆದೇಶ ಅನ್ವಯ ಆಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.