ADVERTISEMENT

ವಕ್ಫ್‌ ಮಂಡಳಿಗೆ ಬೇಕಾದರೆ ಸಚಿವ ಜಮೀರ್‌ ಆಸ್ತಿ ಬರೆಸಿಕೊಡಿ: ಆರ್‌. ಅಶೋಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಅಕ್ಟೋಬರ್ 2024, 12:44 IST
Last Updated 31 ಅಕ್ಟೋಬರ್ 2024, 12:44 IST
<div class="paragraphs"><p>ಅಶೋಕ– ಸಿದ್ದರಾಮಯ್ಯ</p></div>

ಅಶೋಕ– ಸಿದ್ದರಾಮಯ್ಯ

   

ಪ್ರಜಾವಾಣಿ ಚಿತ್ರ

ಬೆಂಗಳೂರು: ವಕ್ಫ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ರೈತರ ಭೂಮಿಗೆ ಕನ್ನ ಹಾಕಿದ್ದಾಯ್ತು, ದೇವಾಲಯಗಳ ಆಸ್ತಿ ಮೇಲೆ ದಬ್ಬಾಳಿಕೆ ಮಾಡಿದ್ದಾಯ್ತು, ಈಗ ವಕ್ಫ್‌ ಮಂಡಳಿ ಹೆಸರಿನಲ್ಲಿ ಹಿಂದೂಗಳ ಸ್ಮಶಾನವನ್ನೂ ಕಬಳಿಸಲು ಲಜ್ಜೆಗೆಟ್ಟ ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ’ ಎಂದು ಕಿಡಿಕಾರಿದ್ದಾರೆ.

‘ಹಿಂದೂಗಳೆಂದರೆ ನಿಮ್ಮ ಸರ್ಕಾರಕ್ಕೆ ಯಾಕಿಷ್ಟು ದ್ವೇಷ?, ವಕ್ಫ್‌ ಬೋರ್ಡ್‌ಗೆ ಬೇಕಾದರೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರ ಆಸ್ತಿ ಬರೆಸಿಕೊಡಿ, ನಿಮ್ಮ ಆಸ್ತಿ ಕೊಡಿ, ಕಾಂಗ್ರೆಸ್‌ನ ಸಚಿವರು ಹಾಗೂ ಶಾಸಕರ ಆಸ್ತಿ ಕೊಡಿಸಿ. ಆದರೆ, ಜನ ಸಾಮಾನ್ಯರ ಮೇಲೆ ಯಾಕಿಷ್ಟು ದಬ್ಬಾಳಿಕೆ ಮಾಡುತ್ತಿದ್ದೀರಿ. ನಿಮ್ಮ ಅಣ್ಣತಮ್ಮಂದಿರ ಮೇಲಿರುವ ಪ್ರೀತಿಗೆ ಹಿಂದೂಗಳಿಗೆ ಯಾಕೆ ತೊಂದರೆ ಕೊಡುತ್ತೀರಿ‘ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಶೋಕ ಪ್ರಶ್ನಿಸಿದ್ದಾರೆ.

‘ವಕ್ಫ್‌ ಮಂಡಳಿ ನೆಪದಲ್ಲಿ ಲ್ಯಾಂಡ್‌ ಜಿಹಾದ್‌ಗೆ ಕಾಂಗ್ರೆಸ್‌ ಸರ್ಕಾರದ ಸಂಪೂರ್ಣ ಸಹಕಾರ ಇರಲಿದೆ ಎಂದು ಮುಸ್ಲಿಂರಿಗೆ ಪ್ರತ್ಯೇಕವಾಗಿ ಆರನೇ ಗ್ಯಾರಂಟಿ ಏನಾದರೂ ಕೊಟ್ಟಿದ್ದೀರಾ’ ಎಂದು ಸಿಎಂ ವಿರುದ್ಧ ಗುಡುಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.