ಬೆಂಗಳೂರು: ಉಪ ಚುನಾವಣೆ ಘೋಷಣೆಯಾದ ಬಳಿಕ ಬದಿಗೆ ಸರಿದಿದ್ದ ಬಿಜೆಪಿ ನಾಯಕರ ಮಧ್ಯದ ಬಣ ಜಗಳ, ಮತದಾನ ಮುಗಿದ ಬೆನ್ನಲ್ಲೇ ಸ್ಫೋಟಗೊಂಡಿದೆ.
ವಕ್ಫ್ ಆಸ್ತಿ ಬಗ್ಗೆ ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳುವುದಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣ ಸುದ್ದಿಗೋಷ್ಠಿ ನಡೆಸಿ ಘೋಷಿಸಿದೆ. ಅದಾದ ಕೆಲ ಹೊತ್ತಿನಲ್ಲೇ ಸುದ್ದಿಗಾರರ ಜೊತೆ ಮಾತನಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಮೂರು ತಂಡಗಳನ್ನು ರಚಿಸಲಾಗಿದ್ದು ಎಲ್ಲ ಜಿಲ್ಲೆಗಳಿಗೆ ಪ್ರವಾಸ ತೆರಳಿ ಮಾಹಿತಿ ಸಂಗ್ರಹಿಸುವುದಾಗಿ ಪ್ರಕಟಿಸಿದರು. ಹೋರಾಟದ ವಿಷಯದಲ್ಲಿ ಎರಡು ಬಣಗಳ ಒಡಕು ಈ ಮೂಲಕ ಬಹಿರಂಗಗೊಂಡಂತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.