ADVERTISEMENT

ಆಲಮಟ್ಟಿಯಿಂದ ನಾರಾಯಣಪುರ ಜಲಾಶಯಕ್ಕೆ ನೀರು, ಕಣ್ಮನ ಸೆಳೆದ ನೋಟ  

​ಪ್ರಜಾವಾಣಿ ವಾರ್ತೆ
Published 22 ಜುಲೈ 2018, 9:09 IST
Last Updated 22 ಜುಲೈ 2018, 9:09 IST
ಆಲಮಟ್ಟಿಯಿಂದ ನಾರಾಯಣಪುರ ಜಲಾಶಯಕ್ಕೆ ನೀರು ಹರಿಸಲಾಗುತ್ತಿದೆ. ಜಲಾಶಯದ ಕ್ರೆಸ್ಟ್ ಗೇಟ್ ಬಳಿ ಅಳವಡಿಸಿರುವ ಬಣ್ಣ ಬಣ್ಣದ ದೀಪಗಳ ಬೆಳಕಿನಲ್ಲಿ ಶನಿವಾರ ರಾತ್ರಿ ಜಲಾಶಯ ಕಣ್ಮನ ಸೆಳೆಯಿತು.
ಆಲಮಟ್ಟಿಯಿಂದ ನಾರಾಯಣಪುರ ಜಲಾಶಯಕ್ಕೆ ನೀರು ಹರಿಸಲಾಗುತ್ತಿದೆ. ಜಲಾಶಯದ ಕ್ರೆಸ್ಟ್ ಗೇಟ್ ಬಳಿ ಅಳವಡಿಸಿರುವ ಬಣ್ಣ ಬಣ್ಣದ ದೀಪಗಳ ಬೆಳಕಿನಲ್ಲಿ ಶನಿವಾರ ರಾತ್ರಿ ಜಲಾಶಯ ಕಣ್ಮನ ಸೆಳೆಯಿತು.   

ಬಾಗಲಕೋಟೆ:ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಕೃಷ್ಣಾ ಹಾಗೂ ಘಟಪ್ರಭಾ ನದಿಗಳು ಮೈದುಂಬಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ.

ಕೃಷ್ಣಾ ಕಾಡಾ ಸಮಿತಿಯ ತೀರ್ಮಾನದಂತೆ ಆಲಮಟ್ಟಿಯಿಂದ ನಾರಾಯಣಪುರ ಜಲಾಶಯಕ್ಕೆ ನೀರು ಹರಿಸಲಾಗುತ್ತಿದೆ.

ಜಲಾಶಯದ ಕ್ರೆಸ್ಟ್ ಗೇಟ್ ಬಳಿ ಅಳವಡಿಸಿರುವ ಬಣ್ಣ ಬಣ್ಣದ ದೀಪಗಳ ಬೆಳಕಿನಲ್ಲಿ ಶನಿವಾರ ರಾತ್ರಿ ಜಲಾಶಯ ಕಣ್ಮನ ಸೆಳೆಯಿತು.

ADVERTISEMENT

ಕೃಷ್ಣಾ, ಉಪನದಿಗಳಲ್ಲಿ ನೀರಿನ ಹರಿವು ಇಳಿಕೆ
ಬೆಳಗಾವಿ:
ನೆರೆಯ ಮಹಾರಾಷ್ಟ್ರದ ಸಹ್ಯಾದ್ರಿ ಪರ್ವತಶ್ರೇಣಿಯಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿದ್ದ ಕುಂಭದ್ರೋಣ ಮಳೆ ಅಬ್ಬರ ಗಣನೀಯ ಪ್ರಮಾಣದಲ್ಲಿ ತಗ್ಗಿದೆ.

ಪರಿಣಾಮವಾಗಿ ಮಹಾರಾಷ್ಟ್ರ ದಿಂದ ರಾಜ್ಯಕ್ಕೆ ಕೃಷ್ಣಾ ಮತ್ತು ಉಪನದಿಗಳ ಮೂಲಕ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲೂ ಇಳಿಕೆಯಾಗಿದೆ. ಭಾನುವಾರ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಶನಿವಾರ ಹರಿದು ಬರುತ್ತಿದ್ದ ನೀರಿನ ಪ್ರಮಾಣ 1.79 ಲಕ್ಷ ಕ್ಯುಸೆಕ್‌ನಿಂದ ಭಾನುವಾರ 1.73 ಲಕ್ಷ ಕ್ಯುಸೆಕ್‌ಗೆ ಇಳಿದಿದೆ.

ದೂಧಗಂಗಾ ಮತ್ತು ವೇದಗಂಗಾ ನದಿಗಳ ಒಳಹರಿವು ಇಳಿಮುಖವಾಗಿದ್ದು, ಜತ್ರಾಟ-ಭೀವಶಿ ಗ್ರಾಮಗಳ ಮಧ್ಯೆ ಇರುವ ಸೇತುವೆ ಮೇಲೆ ಕೇವಲ ಅರ್ಧ ಅಡಿಯಷ್ಟು ಮಾತ್ರ ನೀರು ಹರಿದು ಬರುತ್ತಿದೆ. ಕೃಷ್ಣಾ ನದಿ ನೀರಿನ ಒಳ ಹರಿವು ಯಥಾಸ್ಥಿತಿಯಲ್ಲಿ‌ ಇದೆ.
ಹಿಪ್ಪರಗಿ ಜಲಾಶಯಕ್ಕೆ 2.05 ಲಕ್ಷ ಕ್ಯುಸೆಕ್‌ ಒಳಹರಿವು ಇದ್ದು, 2.05 ಲಕ್ಷ ಕ್ಯುಸೆಕ್ ನೀರನ್ನು ಆಲಮಟ್ಟಿ ಜಲಾಶಯಕ್ಕೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಉಪವಿಭಾಗಾಧಿಕಾರಿ ಗೀತಾ ಕೌಲಗಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.