ಬೆಂಗಳೂರು: ‘ನಾವು ಯಾರ ಅನ್ನವನ್ನೂ ಕಸಿಯುತ್ತಿಲ್ಲ. ಬಿಜೆಪಿಗೆ ರಾಜಕೀಯ ಮಾಡುವುದು ಬಿಟ್ಟು ಬೇರೇನು ಕೆಲಸ? ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.
‘ಬಿಪಿಎಲ್ ಕಾರ್ಡ್ ಪರಿಷ್ಕರಣೆ ಮೂಲಕ ಸರ್ಕಾರ ಬಡವರ ಅನ್ನ ಕಸಿಯುತ್ತಿದೆ’ ಎಂಬ ಟೀಕೆ ಬಗ್ಗೆ ಕೇಳಿದಾಗ, ‘ಬಿಜೆಪಿಯವರಿಗೆ ಬೇರೇನು ಕೆಲಸವಿದೆ. ನಮ್ಮ ಕ್ಷೇತ್ರದಲ್ಲಿ ಶೇ 90ರಷ್ಟು, ಹೊಳೆನರಸೀಪುರದಲ್ಲಿ ಶೇ 92 ಬಿಪಿಎಲ್ ಕಾರ್ಡುದಾರರಿದ್ದಾರೆ. ಅವುಗಳನ್ನು ಪರಿಶೀಲನೆ ಮಾಡಬೇಕಲ್ಲವೇ’ ಎಂದರು.
‘ನಿಜವಾದ ಅರ್ಹರಿಗೆ ಬಿಪಿಎಲ್ ಕಾರ್ಡ್ ಸಿಕ್ಕಿದೆಯೇ ಇಲ್ಲವೇ ಎಂದು ನೋಡಬೇಕಾಗಿದೆ. ಕೆಲವು ಮಾನದಂಡಗಳ ಆಧಾರದ ಮೇಲೆ ಕೆಲವು ಬಿಪಿಎಲ್ ಕಾರ್ಡುಗಳು ರದ್ದಾಗಿವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.