ADVERTISEMENT

ಕೇಸರಿ ಶಾಲು ಧರಿಸಲು ನಾವೇ ಕರೆ ನೀಡುತ್ತೇವೆ: ಎಂ.ಪಿ.ರೇಣುಕಾಚಾರ್ಯ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2023, 7:29 IST
Last Updated 23 ಡಿಸೆಂಬರ್ 2023, 7:29 IST
ಎಂ.ಪಿ.ರೇಣುಕಾಚಾರ್ಯ
ಎಂ.ಪಿ.ರೇಣುಕಾಚಾರ್ಯ   

ದಾವಣಗೆರೆ: ‘ಮುಸ್ಲಿಂ ಹೆಣ್ಣು ಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದರೆ, ಹಿಂದೂ ಯುವಕ, ಯುವತಿಯರಿಗೂ ಕೇಸರಿ ಶಾಲು ಧರಿಸಲು ಅವಕಾಶ ನೀಡಬೇಕು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು.

‘ಅಂದಿನ ಬಿಜೆಪಿ ಸರ್ಕಾರದ ಅದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಹಿಜಾಬ್ ಆದೇಶ ವಾಪಸ್ ಪಡೆದರೆ ಹಿಂದೂ ಯುವಕರಿಗೆ ಕೇಸರಿ ಶಾಲು ಧರಿಸುವಂತೆ ನಾವೇ ಕರೆ ನೀಡುತ್ತೇವೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಊಟ, ಬಟ್ಟೆ ನಮ್ಮ ಹಕ್ಕು ಎನ್ನುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಇಲ್ಲ. ಬದಲಾಗಿ ಟಿಪ್ಪು ಸುಲ್ತಾನ್ ನೇತೃತ್ವದ ತುಘಲಕ್ ಸರ್ಕಾರ‌ ಇದೆ’ ಎಂದು ಆರೋಪಿಸಿದರು.

ADVERTISEMENT

‘ಎಲ್‌ಕೆಜಿಯಿಂದ ಕಾಲೇಜಿನವರೆಗೂ‌ ಸಮವಸ್ತ್ರ ಕಡ್ಡಾಯ ಮಾಡಲಾಗಿದ್ದು, 2021ರಲ್ಲಿ ಉಡುಪಿ ಪಿಯು ಕಾಲೇಜು ವಿದ್ಯಾರ್ಥಿನಿಯರು ಹಿಜಾಬ್ ಅನ್ನು ಮುನ್ನೆಲೆಗೆ ತಂದಿದ್ದರು. ಅಂದು ರಾಜ್ಯದಲ್ಲಿ ದೊಡ್ಡ ಘಟನೆಯೇ ನಡೆದು ಹೋಯಿತು’ ಎಂದು ಸ್ಮರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.