ADVERTISEMENT

ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರಿಕೆ; 11 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2024, 15:54 IST
Last Updated 16 ಅಕ್ಟೋಬರ್ 2024, 15:54 IST
<div class="paragraphs"><p>ಭಾರಿ ಮಳೆ ಸುರಿಯುತ್ತಿರುವುದು</p></div>

ಭಾರಿ ಮಳೆ ಸುರಿಯುತ್ತಿರುವುದು

   

ಬೆಂಗಳೂರು: ರಾಜ್ಯದ ವಿವಿಧೆಡೆ ಗುರುವಾರವೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಹನ್ನೊಂದು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. 

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ADVERTISEMENT

ಕರಾವಳಿಯಲ್ಲಿ ಪ್ರತಿ ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಚಂಡಮಾರುತದ ವಾತಾವರಣ ಇರಲಿದೆ. ಆದ್ದರಿಂದ, ಮೀನುಗಾರರು ಎಚ್ಚರವಹಿಸಬೇಕು ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವವಿದೆ. ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ಶುಕ್ರವಾರದಿಂದ ರಾಜ್ಯದಾದ್ಯಂತ ಮಳೆಯ ತೀವ್ರತೆ ತಗ್ಗುವ ಸಾಧ್ಯತೆಯಿದ್ದು, ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಇದೇ 22 ರವರೆಗೂ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.