ಬೆಂಗಳೂರು: ರಾಜ್ಯದ ವಿವಿಧಡೆ ಮಂಗಳವಾರದಿಂದ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದ ಬಹುತೇಕ ಕಡೆ ಸೋಮವಾರ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳ ನಾಡಿನ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
17ರಂದು ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.