ಬೆಂಗಳೂರು: ಅಂತರರಾಷ್ಟ್ರೀಯ ಚಿತ್ರ ಕಲಾವಿದ ಬಿ.ಕೆ.ಎಸ್. ವರ್ಮ (74) ಅವರು ಸೋಮವಾರ ಬೆಳಿಗ್ಗೆ ನಿಧನರಾದರು.
ಅತ್ತಿಬೆಲೆ ಬಳಿಯ ಕರ್ನೂರಿನಲ್ಲಿ 1949ರಲ್ಲಿ ವರ್ಮ ಅವರು ಜನಿಸಿದ್ದರು. ತಂದೆ ಕೃಷ್ಣಮಾಚಾರ್ಯರು, ಸಂಗೀತಗಾರರಾಗಿದ್ದರು. ತಾಯಿ ಜಯಲಕ್ಷ್ಮಿ, ಚಿತ್ರ ಕಲಾವಿದರಾಗಿದ್ದರು.
ವರ್ಮ ಸಾಧನೆಗೆ ರಾಜ್ಯ ಲಲಿತಕಲಾ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ರಾಜೀವ್‌ಗಾಂಧಿ ಪ್ರಶಸ್ತಿ ಲಭಿಸಿದ್ದವು.
2011ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯವು ವರ್ಮ ಅವರಿಗೆ ಗೌರವ ಡಾಕ್ಟರೇಟ್ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.