ಹುಬ್ಬಳ್ಳಿ: ‘ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕೊಟ್ಟರೇ ತಪ್ಪೇನು? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೀಸಲಾತಿ ಕೇಳುವ ಹಕ್ಕು ಎಲ್ಲರಿಗೂ ಇದೆ. ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಿದರೆ ತಪ್ಪೇನಿಲ್ಲ’ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕೇವಲ ಮುಸ್ಲಿಮರಿಗಷ್ಟೇ ಅಲ್ಲ, ಹಿಂದೂ ಸಮಾಜದಲ್ಲಿರುವ ಬಡವರಿಗೂ ಮೀಸಲಾತಿ ನೀಡಬೇಕು. ನಾವು ಲಿಂಗಾಯತರು ಸಹ ಮೀಸಲಾತಿ ಕೇಳುತ್ತಿದ್ದೇವೆ. ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳು ಮೀಸಲಾತಿ ಕೇಳುತ್ತಿವೆ. ಬಡವರ ಸಂಖ್ಯೆ ಜಾಸ್ತಿಯಿದೆ. ರಾಜಕೀಯವಾಗಿ ಹಿಂದೂ- ಮುಸ್ಲಿಂ ಅಂತ ಮಾತನಾಡುತ್ತಾ ನಾವು ಎಂತಹ ಸ್ಥಿತಿಗೆ ಬಂದಿದ್ದೇವೆ ಎಂದರೆ, ಅವರು ನಾವು ವೈರಿಗಳು ಎನ್ನುವ ಮನಸ್ಥಿತಿಗೆ ಬಂದಿದ್ದೇವೆ. ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರು ಮೀಸಲಾತಿ ಕೇಳಬಹುದು. ಆದರೆ ಅದನ್ನು ರಾಜಕೀಯ ಮಾಡಬಾರದು’ ಎಂದು ಸಲಹೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.