ADVERTISEMENT

ಎಚ್‌ಡಿಕೆಗೆ ‘ಕರಿಯಾ’ ಎಂದಿದ್ದು ಜಮೀರ್ ತಪ್ಪು: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2024, 15:44 IST
Last Updated 16 ನವೆಂಬರ್ 2024, 15:44 IST
<div class="paragraphs"><p>ಡಿ.ಕೆ. ಶಿವಕುಮಾರ್</p></div>

ಡಿ.ಕೆ. ಶಿವಕುಮಾರ್

   

ಬೆಂಗಳೂರು: ‘ಕೇಂದ್ರ ಸಚಿವ ಎಚ್​.ಡಿ.ಕುಮಾರಸ್ವಾಮಿ ಅವರ ಬಗ್ಗೆ ಸಚಿವ ಜಮೀರ್ ಅಹಮದ್‌ ಖಾನ್‌ ಅವರು ‘ಕರಿಯ’ ಎಂಬ ಬದ ಬಳಸಿರುವುದು ತಪ್ಪು’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕಪ್ಪು ಬಿಳುಪು ಎಂದು ಕರೆಯುವುದು ಸರಿಯಲ್ಲ. ಜಮೀರ್ ಮತ್ತು ಕುಮಾರಸ್ವಾಮಿ ಏನು ಬೇಕಾದರೂ ಕರೆದುಕೊಳ್ಳಲಿ. ಕರಿಯ ಎಂದಾದರೂ ಹೇಳಲಿ, ಕೊಚ್ಚೆ ಎಂದಾದರೂ ಕರೆಯಲಿ. ಆದರೆ, ಪಕ್ಷದ ಅಧ್ಯಕ್ಷನಾಗಿ ನಾನು ಹೇಳುತ್ತಿದ್ದೇನೆ, ಜಮೀರ್‌ ಹೇಳಿಕೆ ಸರಿಯಲ್ಲ’ ಎಂದರು.

ADVERTISEMENT

‘ಜಮೀರ್ ಅವರನ್ನು ತಿದ್ದುವ ಕೆಲಸ ಮಾಡುತ್ತೇವೆ. ಅವರ ಮೇಲೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಸಾರ್ವಜನಿಕವಾಗಿ ಹೇಳಲು ಆಗುವುದಿಲ್ಲ’ ಎಂದರು.

‘ಜಮೀರ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೆಪಿಸಿಸಿ ಉಪಾಧ್ಯಕ್ಷ ಎ.ಆರ್.ಎಂ. ಹುಸೇನ್ ಅವರು ಪತ್ರ ಬರೆದಿದ್ದು, ಕ್ರಮ ತೆಗೆದುಕೊಳ್ಳುತ್ತೀರಾ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಅದು ಅವರಿಬ್ಬರ (ಜಮೀರ್‌ ಮತ್ತು ಕುಮಾರಸ್ವಾಮಿ) ಆಂತರಿಕ ವಿಚಾರ. ಜಮೀರ್ ಅವರು ಪ್ರೀತಿ, ಸಲುಗೆಯಿಂದ ಮಾತನಾಡಿದ್ದಾರೋ ಗೊತ್ತಿಲ್ಲ. ಮಾತನಾಡಿದ್ದು ತಪ್ಪು ಎಂದು ಅವರಿಗೆ ಹೇಳಿದ್ದೇವೆ. ಅದಕ್ಕೆ ಅವರು ಈಗಾಗಲೇ ಕ್ಷಮೆ ಕೇಳಿದ್ದಾರೆ’ ಎಂದರು.

‘ಜಮೀರ್ ಅವರನ್ನು ಕುಮಾರಸ್ವಾಮಿ ಅವರು ಕೊಚ್ಚೆ’ ಎಂದು ಕರೆದಿರುವ ಬಗ್ಗೆ ಕೇಳಿದಾಗ, ‘ಮೊದಲೇ ಹೇಳಿದಂತೆ ಅದು ಅವರಿಬ್ಬರಿಗೆ ಬಿಟ್ಟ ವಿಚಾರ. ಅವರು ಕೊಚ್ಚೆ ಎಂದು, ಇವರು ಕರಿಯ ಎಂದು ಕರೆದಿದ್ದನ್ನು ಜನರು ನೋಡಿದ್ದಾರೆ. ಅವರೇ ತೀರ್ಮಾನಿಸುತ್ತಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.