ADVERTISEMENT

ಕಾಂತರಾಜು ವರದಿ ಸ್ವೀಕರಿಸಬೇಡಿ ಎಂದು ಹಿಡಿದುಕೊಂಡಿರುವವರು ಯಾರು? HDK ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2024, 11:08 IST
Last Updated 2 ಫೆಬ್ರುವರಿ 2024, 11:08 IST
<div class="paragraphs"><p>ಜೆಡಿಎಸ್ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ</p></div>

ಜೆಡಿಎಸ್ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ

   

ರಾಮನಗರ: ‘ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಎಚ್. ಕಾಂತರಾಜು ನೇತೃತ್ವದಲ್ಲಿ ಸಿದ್ಧಪಡಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ) ವರದಿಯನ್ನು ಸ್ವೀಕರಿಸಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಿಡಿದುಕೊಂಡಿರುವವರು ಯಾರು?’ ಎಂದು ಜೆಡಿಎಸ್ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

ತಾಲ್ಲೂಕಿನ ಕೇತಗಾನಹಳ್ಳಿಯಲ್ಲಿರುವ ತಮ್ಮ ತೋಟದ ಮನೆಯಲ್ಲಿ ಈ ಕುರಿತು ಶುಕ್ರವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ‘ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ವರದಿ ಸ್ವೀಕರಿಸಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸ್ವೀಕರಿಸುವುದಕ್ಕೆ ಆ ವರದಿಯಲ್ಲಿ ಸದಸ್ಯ ಕಾರ್ಯದರ್ಶಿ ಸಹಿ ಇತ್ತಾ? ಇವತ್ತಿನವರೆಗೂ ಸಹಿ ಹಾಕಿಲ್ಲ. ಸಹಿ ಹಾಕದ ವರದಿಯನ್ನು ನಾನು ಹೇಗೆ ಸ್ವೀಕರಿಸಲಿ. ಸುಮ್ಮನೆ ನನ್ನ ಮೇಲೆ ಆರೋಪ ಮಾಡುತ್ತಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಕಾಂಗ್ರೆಸ್‌ ಸರ್ಕಾರದಲ್ಲಿ ಕಮಿಷನ್ ವ್ಯವಹಾರ ಇದೆ ಎಂದು ನಾನು ಪ್ರಶ್ನೆ ಮಾಡಿದರೆ ಇವರಿಗೆ ಅಸಹನೆ. ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಹೇಳುತ್ತಾರೆ. ನಿತ್ಯ ವರ್ಗಾವಣೆ ಮಾಡುತ್ತಿದ್ದಾರೆ. ಇದೀಗ, ಅವರದ್ದೇ ಪಕ್ಷದವರಾದ ಹಾಸನದ ಮಾಜಿ ಸಚಿವ ಬಿ. ಶಿವರಾಮ್ ಕಮಿಷನ್ ಆರೋಪ ಮಾಡಿದ್ದಾರೆ. ಬಿಜೆಪಿಗಿಂತಲೂ ಕಾಂಗ್ರೆಸ್‌ನಲ್ಲಿ ಕಮಿಷನ್ ಪರ್ಸೆಂಟ್ ಜಾಸ್ತಿಯಾಗಿದೆ ಎಂದು ತಲೆ ಚಚ್ಚಿಕೊಂಡಿದ್ದಾರೆ. ಹೀಗಿದ್ದರೂ, ಸಿದ್ದರಾಮಯ್ಯ ಅವರು ಮೋದಿ ಅವರನ್ನು ಟೀಕಿಸುತ್ತಾರೆ. ಮೊದಲು ಅವರ ಸ್ಥಿತಿ ನೋಡಿಕೊಳ್ಳಲಿ’ ಎಂದು ವ್ಯಂಗ್ಯವಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.