ಕಲಬುರಗಿ: ಹುಬ್ಬಳ್ಳಿಯ ನೇಹಾ ಕೊಲೆಯನ್ನು ಬಂಡವಾಳನ್ನಾಗಿ ಮಾಡಿಕೊಂಡ ಬಿಜೆಪಿಯವರು ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಪ್ರಕರದಣ ಬಗ್ಗೆ ಯಾಕೆ ಮೌನವಾಗಿದ್ದಾರೆ ಎಂದು ಸಚಿವ ಪ್ರಿಯಾಂಕ ಖರ್ಗೆ ಪ್ರಶ್ನೆ ಮಾಡಿದ್ದಾರೆ.
ಇಲ್ಲಿ ಎಎನ್‌ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, 'ಹಾಸನ ಸಂಸದ ಇಂತಹ ಕೃತ್ಯಗಳಿಗೆ ಹೆಸರಾದವರು ಎಂಬ ಸತ್ಯ ಗೊತ್ತಿದ್ದರೂ, ಅವರಿಂದ ಸಾವಿರಾರು ಮಂದಿ ದೌರ್ಜನ್ಯಕ್ಕೊಳಗಾಗಿದ್ದಾರೆ ಎಂದು ಬಿಜೆಪಿ ಪದಾಧಿಕಾರಿಗಳು ಪತ್ರ ಬರೆದರೂ ಅವರಿಗೆ ಟಿಕೆಟ್ ನೀಡಲಾಯಿತು ಎಂದಿದ್ದಾರೆ.
ಹುಬ್ಬಳ್ಳಿಯ ಕೊಲೆ ಪ್ರಕರಣವನ್ನು ಬಂಡವಾಳವನ್ನಾಗಿ ಮಾಡಿಕೊಂಡವರು ಈಗ ಯಾಕೆ ಮೌನವಾಗಿದ್ದಾರೆ? ಯಾಕೆ ಪ್ರತಿಭಟನೆ ನಡೆಸುತ್ತಿಲ್ಲ. ಹುಬ್ಬಳ್ಳಿ ಕೊಲೆ ಪ್ರಕರಣದಲ್ಲಿ ಮಾಡಿದ ಹಾಗೆ ಯಾಕೆ ಪ್ರತಿ ಹಳ್ಳಿಗಳಲ್ಲಿ ಪ್ರತಿಭಟನೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅವರ ಈ ವಿಷಯ ತಿಳಿದಿದ್ದರೂ ಅವರಿಗೆ ಟಿಕೆಟ್ ನೀಡಿ, ಅವರ ಪರವಾಗಿ ಪ್ರಚಾರವನ್ನೂ ಮಾಡಿದರು. ದೇಶ ಬಿಡಲೂ ಸಹಕರಿಸಿದರು. ಪ್ರಜ್ವಲ್ ರೇವಣ್ಣ ದೇಶ ಬಿಟ್ಟಿರುವ ಮಾಹಿತಿ ಇದೆ. ಅವರು ದೇಶ ಬಿಡಲು ಸಹಾಯ ಮಾಡಿದವರು ಯಾರು? ಬಿಜೆಪಿಯ ಮೇಲೆ ನಾನು ನೇರ ಆರೋಪ ಮಾಡುತ್ತೇನೆ ಎಂದು ಪ್ರಿಯಾಂಕ ಖರ್ಗೆ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.