ADVERTISEMENT

ಕೃಷಿ ಇಲಾಖೆಯಲ್ಲಿ 979 ಹುದ್ದೆಗಳ ಭರ್ತಿ: ಸಚಿವ ಚಲುವರಾಯಸ್ವಾಮಿ

​ಪ್ರಜಾವಾಣಿ ವಾರ್ತೆ
Published 29 ಜೂನ್ 2024, 9:52 IST
Last Updated 29 ಜೂನ್ 2024, 9:52 IST
<div class="paragraphs"><p>ಎನ್‌. ಚಲುವರಾಯಸ್ವಾಮಿ</p></div>

ಎನ್‌. ಚಲುವರಾಯಸ್ವಾಮಿ

   

ಬೀದರ್‌: ‘ರಾಜ್ಯದಲ್ಲಿ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 979 ಹುದ್ದೆಗಳನ್ನು ಭರ್ತಿ ಮಾಡಲಾಗುವುದು’ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ತಿಳಿಸಿದರು.

ನಗರದಲ್ಲಿ ಶನಿವಾರ ನಡೆದ ಕಲಬುರಗಿ ವಿಭಾಗ ಮಟ್ಟದ ಕೃಷಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 42 ಕೃಷಿ ಅಧಿಕಾರಿಗಳು, 231 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳನ್ನು ಒಳಗೊಂಡಂತೆ ರಾಜ್ಯದಲ್ಲಿ 979 ಹುದ್ದೆಗಳನ್ನು ತುಂಬಲಾಗುವುದು. ಈ ಸಂಬಂಧ ಈಗಾಗಲೇ ಕೆಪಿಎಸ್‌ಸಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎರಡ್ಮೂರು ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ADVERTISEMENT

ಪ್ರಸಕ್ತ ವರ್ಷ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿಗೆ ತರಲಾಗುವುದು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗಿದೆ. ಆಹಾರ ಸಂಸ್ಕರಣೆ ಮತ್ತು ರಫ್ತು ಉತ್ತೇಜನಕ್ಕೆ ಪ್ರತ್ಯೇಕ ಆಯುಕ್ತಾಲಯ ಸ್ಥಾಪಿಸಲಾಗುವುದು. ಇ–ಸ್ಯಾಪ್‌ ತಂತ್ರಾಂಶ ವಿಸ್ತರಿಸಲಾಗುವುದು. ಕೃಷಿಯಲ್ಲಿ ತಂತ್ರಜ್ಞಾನ ಆಧಾರಿತ ಮುನ್ಸೂಚನೆ ಮತ್ತು ದತ್ತಾಂಶ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಸ್ಟಾರ್ಟ್‌ ಅಪ್‌ಗಳಿಗೆ ಉತ್ತೇಜನ ನೀಡಲಾಗುವುದು ಎಂದು ತಿಳಿಸಿದರು.

ರಾಜ್ಯದಾದ್ಯಂತ ಉತ್ತಮ ಮಳೆಯಾಗಿದ್ದು 84 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಶೇ 51ರಷ್ಟು ಬಿತ್ತನೆ ಮುಗಿದಿದೆ. ಈಗ ಮಳೆಯ ಅಗತ್ಯವಿದ್ದು, ಉತ್ತಮ ಮಳೆಯ ಆಶಾಭಾವನೆ ಇದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.