ADVERTISEMENT

ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕಾನೂನು ಕ್ರಮ: ಜಮೀರ್‌ ಅಹಮದ್‌ ಖಾನ್‌

​ಪ್ರಜಾವಾಣಿ ವಾರ್ತೆ
Published 8 ಜೂನ್ 2023, 20:04 IST
Last Updated 8 ಜೂನ್ 2023, 20:04 IST
ಜಮೀರ್‌ ಅಹಮದ್‌ ಖಾನ್‌
ಜಮೀರ್‌ ಅಹಮದ್‌ ಖಾನ್‌   

ಬೆಂಗಳೂರು: ‘ನನ್ನ ಹೆಸರನ್ನು ಬಳಸಿಕೊಂಡು ಸುಳ್ಳು ಸುದ್ದಿ ಸೃಷ್ಟಿಸಿ, ಸಮಾಜದಲ್ಲಿ ಅಶಾಂತಿ ಉಂಟುಮಾಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುತ್ತೇನೆ’ ಎಂದು ವಸತಿ ಸಚಿವ ಬಿ.ಜಡ್. ಜಮೀರ್‌ ಅಹಮದ್ ಖಾನ್‌ ಎಚ್ಚರಿಕೆ ನೀಡಿದ್ದಾರೆ.

‘ಹಜ್‌ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ₹ 5,000 ಕೋಟಿ ಅನುದಾನ ನೀಡಿದ್ದಾರೆ’ ಎಂಬುದಾಗಿ ಸಚಿವರು ಹೇಳಿಕೆ ನೀಡಿರುವ ರೀತಿಯಲ್ಲಿ ಸುದ್ದಿಯ ತುಣುಕು ಸೃಷ್ಟಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಟ್ಟಿರುವ ಕುರಿತು ಗುರುವಾರ ಪ್ರತಿಕ್ರಿಯೆ ನೀಡಿರುವ ಅವರು, ‘ನಾನು ಅಂತಹ ಹೇಳಿಕೆಯನ್ನೇ ನೀಡಿಲ್ಲ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಕೆಲವರು ಸುಳ್ಳು ಸುದ್ದಿ ಸೃಷ್ಟಿಸಿ, ಹರಿಯಬಿಟ್ಟಿದ್ದಾರೆ’ ಎಂದು ಹೇಳಿದ್ದಾರೆ.

ಪ್ರಕರಣದ ಕುರಿತು ಶುಕ್ರವಾರ ಪೊಲೀಸರಿಗೆ ದೂರು ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.