ADVERTISEMENT

ಸ್ವಾಮೀಜಿ ಹೇಳಿದ ತಕ್ಷಣ ಸಿಎಂ ಸ್ಥಾನ ಬಿಟ್ಟುಕೊಡಲು ಆಗುತ್ತಾ?: ಕೆ.ಎನ್‌.ರಾಜಣ್ಣ

​ಪ್ರಜಾವಾಣಿ ವಾರ್ತೆ
Published 27 ಜೂನ್ 2024, 11:32 IST
Last Updated 27 ಜೂನ್ 2024, 11:32 IST
<div class="paragraphs"><p>ಕೆ.ಎನ್‌.ರಾಜಣ್ಣ</p></div>

ಕೆ.ಎನ್‌.ರಾಜಣ್ಣ

   

ಬೆಂಗಳೂರು: ಸ್ವಾಮೀಜಿಗಳು ಹೇಳಿದ ತಕ್ಷಣ ಬಿಟ್ಟುಕೊಡೋಕೆ ಆಗತ್ತಾ? ಮುಖ್ಯಮಂತ್ರಿ ಸ್ಥಾನ ಯಾರು ಬಿಟ್ಟು ಕೊಡೋಕೆ ಹೋಗ್ತಾರೆ?  ಆ ಸ್ವಾಮೀಜಿಗಳು ಅವರ ಸ್ಥಾನ ಬಿಟ್ಟು ಕೊಡ್ತಾರಾ ಎಂದು ಸಚಿವ ಕೆ.ಎನ್‌.ರಾಜಣ್ಣ ಅವರು ಪ್ರಶ್ನಿಸಿದರು.

ಚಂದ್ರಶೇಖರನಾಥ ಸ್ವಾಮೀಜಿ ಅವರು ಗುರುವಾರ ಕೆಂಪೇಗೌಡ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿ ,ಸಿದ್ದರಾಮಯ್ಯ ಅವರು ದೊಡ್ಡ ಮನಸ್ಸು ಮಾಡಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕು ಎಂಬುದಾಗಿ ನೀಡಿದ ಹೇಳಿಕೆಗೆ ರಾಜಣ್ಣ ತಿರುಗೇಟು ನೀಡಿದ್ದಾರೆ.

ADVERTISEMENT

‘ಸ್ವಾಮೀಜಿಗೆ ಕೇಳಿ ನೋಡಿ.. ನಾನೇ ಸ್ವಾಮೀಜಿ ಆಗ್ತೇನೆ. ನಾಳೆಯಿಂದ ನಾನು ಕಾವಿ ಬಟ್ಟೆ ಹಾಕಿಕೊಳ್ಳುತ್ತೇನೆ. ಅವರು ತಮ್ಮ ಸ್ಥಾನ ಬಿಟ್ಟು ಕೊಡುತ್ತಾರಾ?’ ಎಂದು ಸವಾಲು ಹಾಕಿದರು.

‘ಅವರೂ (ಮುಖ್ಯಮಂತ್ರಿ) ಬಿಟ್ಟು ಕೊಡಲ್ಲ. ಇವರೂ (ಸ್ವಾಮೀಜಿ) ಸಹ ಬಿಟ್ಟುಕೊಡಲ್ಲ. ಸ್ವಾಮೀಜಿ ಯಾವ ಉದ್ದೇಶದಿಂದ ಹೇಳಿದ್ದಾರೋ ಗೊತ್ತಿಲ್ಲ. ಸದುದ್ದೇಶದಿಂದ ಹೇಳಿದ್ದಾರೋ ದುರುದ್ದೇಶದಿಂದ ಹೇಳಿದ್ದಾರೋ ಗೊತ್ತಿಲ್ಲ. ಎಲ್ಲರಿಗೂ ವಾಕ್‌ ಸ್ವಾತಂತ್ರ್ಯವಿದೆ, ಮಾತನಾಡುತ್ತಾರೆ. ಮುಂದಿನ 10 ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ’ ಎಂದು ಹೇಳಿದರು.

‘ಸಿಎಂ ಸ್ಥಾನ ಖಾಲಿ ಇಲ್ಲ. ಆದರೆ, ಡಿಸಿಎಂ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡಬೇಕು. ಡಿ.ಕೆ.ಶಿವಕುಮಾರ್‌ ಹೇಳಿದ ಹಾಗೆ ನಾವು ಕೇಳಬೇಕು ಅಂತೇನಿಲ್ಲ. ನಮಗೂ ಸ್ವಂತ ಬುದ್ಧಿ ಇದೆ. ನಾನು ಕಾನೂನು ಪದವೀಧರ. ಪ್ರಚಾರಕ್ಕೇ ಹೇಳ್ತೇವೆ ಅಂತ ಹೇಳಿದರೆ ಅವರು ಹೇಳಿಕೊಳ್ಳಲಿ. ನಾವು ಹೇಳೋದು ಹೇಳಿದ್ದೇವೆ. ಅಂತಿಮವಾಗಿ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.