ADVERTISEMENT

4,244 ಅಂಗನವಾಡಿ ಆರಂಭ: ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2022, 20:38 IST
Last Updated 3 ಸೆಪ್ಟೆಂಬರ್ 2022, 20:38 IST

ಬೆಂಗಳೂರು: ಪೋಷಣ್‌ 2.0 ಯೋಜನೆಯಡಿ ರಾಜ್ಯದಲ್ಲಿ 4,244 ಅಂಗನವಾಡಿಗಳನ್ನು ಆರಂಭಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.

ಕಡಿಮೆ ಆದಾಯದ ಜನರು ಹಾಗೂ ವಲಸೆ ಮತ್ತು ಭೂರಹಿತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳಲ್ಲಿ ಈ ಅಂಗನವಾಡಿಗಳನ್ನು ಆರಂಭಿಸಲಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ 1,655 ಮತ್ತು ನಗರ ಪ್ರದೇಶಗಳಲ್ಲಿ 2,589 ಅಂಗನವಾಡಿಗಳನ್ನು ಆರಂಭಿಸಲಾಗುತ್ತದೆ. ಇದಕ್ಕಾಗಿ ₹ 268.98 ಕೋಟಿ ವೆಚ್ಚ ಮಾಡುವ ಪ್ರಸ್ತಾವಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

‘ಈ ಅಂಗನವಾಡಿಗಳಿಂದ 8,100 ಮಹಿಳೆಯರಿಗೆ ಉದ್ಯೋಗಾವಕಾಶಗಳು ಲಭಿಸಲಿವೆ. ಪ್ರಧಾನಿ ನರೇಂದ್ರ ಮೋದಿಯವರ ಕಲ್ಪನೆಯಂತೆ ಈ ಯೋಜನೆ ರೂಪಿಸಲಾಗಿದೆ. ತ್ವರಿತವಾಗಿ ಅಂಗನವಾಡಿಗಳು ಕಾರ್ಯಾರಂಭ ಮಾಡಲಿವೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್‌ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.