ಬೆಂಗಳೂರು: ‘ರಾಜ್ಯದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಕರ್ನಾಟಕ ಲೇಖಕಿಯರ ಸಂಘದ ಕಾರ್ಯ ಚಟುವಟಿಕೆಗಳಿಗೆ ₹ 1 ಕೋಟಿ ವಿಶೇಷ ಅನುದಾನ ನೀಡಬೇಕು’ ಎಂದು ಸಂಘದ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು.
ಅಕಾಡೆಮಿ ಮತ್ತು ಪ್ರಾಧಿಕಾರಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು. ‘ನನ್ನ ಕವಿತೆ-ನನ್ನ ಹಾಡು’ ಯೋಜನೆಯ ಬಾಕಿ ಹಣವನ್ನು ಬಿಡುಗಡೆ ಮಾಡಲು ಸೂಚಿಸಬೇಕು ಎಂದು ಕೋರಿದರು.
ಸಂಘದ ಅಧ್ಯಕ್ಷೆ ಎಚ್.ಎಲ್.ಪುಷ್ಪ, ವಸುಂಧರಾ ಭೂಪತಿ, ಎಂ.ಎಸ್.ಆಶಾದೇವಿ, ಬಿ.ಟಿ.ಲಲಿತಾನಾಯಕ್ ಸೇರಿದಂತೆ ಹಲವು ಲೇಖಕಿಯರು ನಿಯೋಗದಲ್ಲಿದ್ದರು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿ, ಬೇಡಿಕೆ ಈಡೇರಿಸುವ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.