ADVERTISEMENT

ರವಿ ಡಿ. ಚನ್ನಣ್ಣನವರ್‌ ವಿರುದ್ಧ ಸಿಬಿಐ ತನಿಖೆಗೆ ಕೋರಿ ರಿಟ್‌ ಅರ್ಜಿ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2022, 20:51 IST
Last Updated 28 ಮಾರ್ಚ್ 2022, 20:51 IST
ರವಿ ಡಿ. ಚನ್ನಣ್ಣನವರ್‌
ರವಿ ಡಿ. ಚನ್ನಣ್ಣನವರ್‌   

ಬೆಂಗಳೂರು: ‘ಸಿಐಡಿ ಎಸ್‌ಪಿ ರವಿ ಡಿ. ಚನ್ನಣ್ಣನವರ್ ಅವರು ತಮ್ಮ ಪೋಷಕರು ಮತ್ತು ಸಂಬಂಧಿಕರ ಹೆಸರಿನಲ್ಲಿ ಅಕ್ರಮವಾಗಿ ಕೋಟ್ಯಂತರ ಮೌಲ್ಯದ ಆಸ್ತಿ ಸಂಪಾದಿಸಿರುವ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ನಡೆಸಲು ಸಿಬಿಐ ಅಥವಾ ಇ.ಡಿಗೆ (ಜಾರಿ ನಿರ್ದೇಶನಾಲಯ) ನಿರ್ದೇಶಿಸಬೇಕು‘ ಎಂದು ಕೋರಿ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಲಾಗಿದೆ.

ಈ ಕುರಿತಂತೆ ನಗರದವಕೀಲ ಕೆ.ಎನ್. ಜಗದೀಶ್ ಕುಮಾರ್ ಸಲ್ಲಿಸಿರುವ ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದ್ದು, ಪ್ರಕರಣದಲ್ಲಿ ರಾಜ್ಯ ಗೃಹ ಇಲಾಖೆಯ ಮುಖ್ಯ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವಾಲಯದ ಪ್ರಧಾನ ಕಾರ್ಯದರ್ಶಿ, ಸಿಬಿಐ–ಇಡಿ ನಿರ್ದೇಶಕರು ಮತ್ತು ರವಿ ಡಿ. ಚನ್ನಣ್ಣನವರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT